ಪ್ರತಿಕ್ರಿಯೆ ಸಲ್ಲಿಸಲು ಕೇಂದ್ರಕ್ಕೆ ಸೂಚನೆ

ರಾಷ್ಟ್ರಗೀತೆ ಮತ್ತು ರಾಷ್ಟ್ರಗಾನಕ್ಕೆ ಸಂಬಂಧಿಸಿದಂತೆ ನೀತಿ ರೂಪಿಸಬೇಕೆಂಬ ವಿನಂತಿಗೆ ಮುಂದಿನ ನಾಲ್ಕು ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರಿಂ ಕೋರ್ಟ್ ಸೂಚನೆ ನೀಡಿದೆ.

ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ನ್ಯಾಯಪೀಠವು ಸಂಸತ್ತು, ಶಾಸನ ಸಭೆಗಳು, ನ್ಯಾಯಾಲಯ ಮತ್ತು ಶಾಲಾ ಕಾಲೇಜುಗಳಲ್ಲಿ ರಾಷ್ಟ್ರಗೀತೆ ಮತ್ತು ರಾಷ್ಟ್ರಗಾನ ಹಾಡುವುದನ್ನು  ಕಡ್ಡಾಯಗೊಳಿಸಬಹುದೇ ಎಂಬುದರ ಬಗ್ಗೆ ಅಭಿಪ್ರಾಯ ಸಲ್ಲಿಸಲು ತಿಳಿಸಿದೆ.

ಸಹೋದರತ್ವ ಮತ್ತು ದೇಶದ ಸಮಗ್ರತೆಯನ್ನು ಪ್ರೋತ್ಸಾಹಿಸಲು ಇವುಗಳ ಹಾಡುವಿಕೆಯನ್ನು ಕಡ್ಡಾಯಗೊಳಿಸುವಂತೆ ನಿರ್ದೇಶನ ನೀಡಬೇಕು ಎಂದು ಕೋರಿ ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಅರ್ಜಿ ಸಲ್ಲಿಸಿದ್ದರು.