ನವದೆಹಲಿಯಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ

ದೇಶದ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸಲು ಬುಧವಾರ ಸಂಜೆ ಪ್ರಧಾನಿ ನರೇಂದ್ರ ಮೋದಿ ಅವರ ದೆಹಲಿ ನಿವಾಸದಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ನಡೆಸಲಾಗಿದೆ.

ಹಿರಿಯ ಸಚಿವರಾದ ರಾಜನಾಥ್ ಸಿಂಗ್, ಅರುಣ್ ಜೇಟ್ಲಿ, ಎಂ. ವೆಂಕಯ್ಯ ನಾಯ್ಡು, ನಿತಿನ್ ಗಡ್ಕರಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಬಿಜೆಪಿ ನಾಯಕರಾದ ಎಲ್.ಕೆ. ಆಡ್ವಾಣಿ, ಎಂ.ಎಂ. ಜೋಷೊ, ಉಮಾ ಭಾರತಿ ಸೇರಿದಂತೆ ಇತರೆ ನಾಯಕರ ವಿರುದ್ಧ ಮರು ವಿಚಾರಣೆಗೆ ಸುಪ್ರೀಂಕೋರ್ಟ್ ಆದೇಶಿಸಿದ ಹಿನ್ನೆಲೆಯಲ್ಲಿ ಈ ಸಭೆ ನಡೆಸಲಾಗಿದೆ.