ಉತ್ಕೃಷ್ಟ ಸೇವೆ ಸಲ್ಲಿಸಿದ ಅಧಿಕಾರಿಗಳಿಗೆ ಪ್ರಧಾನಿಯಿಂದ ಇಂದು ಅಭಿನಂದನೆ

ನವದೆಹಲಿಯಲ್ಲಿ ಆಚರಿಸಲಾಗುತ್ತಿರುವ ನಾಗರಿಕ ಸೇವಾ ದಿನಾಚರಣೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದು, ಉತ್ಕೃಷ್ಟ ಸೇವೆ ಸಲ್ಲಿಸಿದ ಅಧಿಕಾರಿಗಳನ್ನು ಅಭಿನಂದಿಸಲಿದ್ದಾರೆ.

ಜಿಲ್ಲಾ, ಕೇಂದ್ರ ಮತ್ತು ರಾಜ್ಯ ಮಟ್ಟದಲ್ಲಿ ಸಾರ್ವಜನಿಕ ಆಡಳಿತ ವ್ಯವಸ್ಥೆಯಲ್ಲಿ ಅತ್ಯುತ್ತಮ ನಿರ್ವಹಣೆ ತೋರಿದ ಸರ್ಕಾರಿ ಸಂಸ್ಥೆಗಳಿಗೆ ಪ್ರಧಾನಿ ಅವರು ಪ್ರಶಸ್ತಿ ವಿತರಣೆ ಮಾಡಲಿದ್ದಾರೆ.

ನಿನ್ನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಗೃಹ ಸಚಿವ ರಾಜನಾಥ್ ಸಿಂಗ್, ತಂತ್ರಜ್ಞಾನದ ನೆರವಿನೊಂದಿಗೆ ಅಧಿಕಾರಿಗಳು ಅತ್ಯುತ್ತಮ ಸೇವೆ ನೀಡಬೇಕೆಂಬ ಪ್ರಧಾನಿ ನರೇಂದ್ರ ಮೋದಿ ಅವರ ಅಭಿವೃದ್ಧಿಯ ಪರಿಕಲ್ಪನೆಯನ್ನು ನಿಜಗೊಳಿಸಲು ಸಾಧ್ಯವಿದೆ ಎಂದರು.