ರಾಷ್ಟ್ರಪತಿ ಚುನಾವಣೆ: ಸೋನಿಯಾ ಭೇಟಿ ಮಾಡಿದ ನಿತೀಶ್

ರಾಷ್ಟ್ರಪತಿ ಹುದ್ದೆಗೆ ವಿಪಕ್ಷಗಳು ಸೇರಿ ಸರ್ವಾನುಮತದ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕು ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರಲ್ಲಿ ಚರ್ಚಿಸಿದ್ದಾರೆ.

ವಿಪಕ್ಷಗಳು ಸರ್ವಾನುಮತದಿಂದ ರಾಷ್ಟ್ರಪತಿ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕು ಎಂಬುದು ನಮ್ಮ ಆಶಯ. ಸೋನಿಯಾ ಗಾಂಧಿ ಅವರು ಅತಿ ದೊಡ್ಡ ವಿಪಕ್ಷದ ನಾಯಕರಾಗಿರುವ ಹಿನ್ನೆಲೆಯಲ್ಲಿ ಅವರ ಮುಂದಾಳತ್ವದಲ್ಲಿ ಈ ಪ್ರಕ್ರಿಯೆ ನಡೆಯಬೇಕು ಎಂದು ಜೆಡಿಯು ವಕ್ತಾರ ಕೆ.ಸಿ. ತ್ಯಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಎಡ ಪಕ್ಷಗಳೊಂದಿಗೆ ಈಗಾಗಲೇ ನಿತಿಶ್ ಕುಮಾರ್ ಅವರು ಚರ್ಚೆ ನಡೆಸಿದ್ದಾರೆ.