ವಿಜಯ್ ಮಲ್ಯ ಭಾರತಕ್ಕೆ ಬಂದ ಮೇಲಷ್ಟೇ ವಿಚಾರಣೆ: ಸುಪ್ರೀಂ

ವಿದೇಶಕ್ಕೆ ಹಾರಿರುವ ಉದ್ಯಮಿ ವಿಜಯ್ ಮಲ್ಯರನ್ನು ದೇಶಕ್ಕೆ ವಾಪಸ್ ಕರೆಸಿಕೊಂಡ ಬಳಿಕವಷ್ಟೇ ಅವರ ಮೇಲಿನ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ತೀರ್ಮಾನ ತೆಗೆದುಕೊಳ್ಳಬಹುದು ಎಂದು ಸುಪ್ರೀಂಕೋರ್ಟ್ ಹೇಳಿದೆ.

ನ್ಯಾಯಾಂಗ ನಿಂದನೆಯಲ್ಲಿ ಅಪರಾಧಿ ಎಂದು ಸಾಬೀತಾಗಿರುವ ವಿಜಯ್ ಮಲ್ಯ ವಿರುದ್ಧ ಸುಪ್ರೀಂಕೋರ್ಟ್ ಶಿಕ್ಷೆ ಪ್ರಮಾಣ ಘೋಷಿಸಬಹುದು ಎಂದು ಅಂದಾಜಿಸಲಾಗಿತ್ತು. ಇದೇ ವೇಳೆ ಮಲ್ಯರನ್ನು ಭಾರತಕ್ಕೆ ವಾಪಸ್ ಕರೆ ತರುವ ವಿಚಾರವಾಗಿ ಕೇಂದ್ರ ಸರ್ಕಾರ ಪೂರ್ಣ ಪ್ರಮಾಣದ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ಗೆ ಲಿಖಿತ ವಿವರಣೆ ನೀಡಿದೆ.