ಇಂದು ಬಿಜೆಪಿ ಸಂಸದೀಯ ಮಂಡಳಿ ಸಭೆ: ಉಪರಾಷ್ಟ್ರಪತಿ ನೇಮಕ ಚರ್ಚೆ

ಇಂದು ನವದೆಹಲಿಯಲ್ಲಿ ಬಿಜೆಪಿ ಸಂಸದೀಯ ಮಂಡಳಿ ಸಭೆ ನಡೆಯಲಿದೆ. ಉಪ ರಾಷ್ಟ್ರಪತಿ ಹುದ್ದಗೆ ಅಭ್ಯರ್ಥಿ ಆಯ್ಕೆ ಮಾಡುವ ಬಗ್ಗೆ ಪಕ್ಷದ ಉನ್ನತ ನಾಯಕರು ಚರ್ಚೆ ಮಾಡುವ ಸಾಧ್ಯತೆ ಇದೆ.
ವಿಪಕ್ಷಗಳು ಈಗಾಗಲೇ ತಮ್ಮ ಅಭ್ಯರ್ಥಿಯನ್ನು ಘೋಷಿಸಿವೆ. ನಾಮಪತ್ರ ಸಲ್ಲಿಕೆಗೆ ಮಂಗಳವಾರ ಕೊನೆಯ ದಿನವಾಗಿದ್ದು, 21ಕ್ಕೆ ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ. ಆಗಸ್ಟ್ 5ರಂದು ಮತದಾನ ನಡೆಯಲಿದೆ.