ಗುಜರಾತ್ ನಲ್ಲಿ ಭಾರೀ ಮಳೆ: 3 ಸಾವು

ಗುಜರಾತ್ ನ ಸೌರಾಷ್ಟ್ರದಲ್ಲಿ ಭಾರೀ ಮಳೆಯಾಗಿದ್ದು, ಸಾರ್ವಜನಿಕ ಜನಜೀವನ ಅಸ್ತವ್ಯಸ್ತಗೊಂಡಿದೆ. ಮೊರ್ಬಿ, ರಾಜ್ಕೋಟ್, ಸುರೇಂದ್ರನಗರ ಮತ್ತು ಬನಸ್ಕಾಂತದಲ್ಲಿ ಮಳೆಯಿಂದಾಗಿ ಭಾರೀ ಹಾನಿಯಾಗಿದೆ. ಮಳೆಯಿಂದಾಗಿ ಮೂರು ಮಂದಿ ಮೃತಪಟ್ಟಿದ್ದು, ನೂರಕ್ಕಿಂತಲೂ ಹೆಚ್ಚು ಮಂದಿಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ವಾಯು ಪಡೆ ಹಾಗೂ ರಾಷ್ಟ್ರೀಯ ಪ್ರಾಕೃತಿಕ ವಿಕೋಪ ನಿರ್ವಹಣಾ ಪಡೆ ನೆರವು ಪಡೆಯಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಬಿರುಸಿನಿಂದ ನಡೆಯುತ್ತಿದೆ.
ಪರಿಸ್ಥಿತಿ ಕುರಿತು ಪರಿಶೀಲನೆ ನಡೆಸಲು ಮುಖ್ಯಮಂತ್ರಿ ವಿಜಯ್ ರೂಪಾನಿ ಅವರು ತುರ್ತು ಸಭೆ ನಡೆಸಿದ್ದು, ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆಯ ನಿರೀಕ್ಷೆಯಿರುವುದರಿಂದ ಮುನ್ನೆಚ್ಚರಿಕಾ ಕ್ರಮಗಳನ್ನುಕೈಗೊಳ್ಳಲು ಸೂಚಿಸಲಾಗಿದೆ.