ಚೀನಾ ಬಿಕ್ಕಟ್ಟು: ಭಾರತದ ನಿಲುವಿಗೆ ವಿಪಕ್ಷಗಳ ಬೆಂಬಲ

ಚೀನಾ ಜತೆಗಿನ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರಕ್ಕೆ ಪೂರ್ಣ ಪ್ರಮಾಣದ ಬೆಂಬಲ ನೀಡಲಾಗುವುದು. ಈ ವಿಷಯದಲ್ಲಿ ರಾಷ್ಟ್ರೀಯ ಏಕತೆ ಮುಖ್ಯ ಎಂದು ಎಲ್ಲಾ ರಾಜಕೀಯ ಪಕ್ಷಗಳು ಹೇಳಿವೆ.
ಚೀನಾ ಮತ್ತು ಕಾಶ್ಮೀರ ಬಿಕ್ಕಟ್ಟಿನ ಬಗ್ಗೆ ವಿರೋಧ ಪಕ್ಷಗಳಿಗೆ ಕೇಂದ್ರ ಸರ್ಕಾರದ ಮೂವರು ಸಚಿವರು ವಿವರಣೆ ನೀಡಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಕೇಂದ್ರ ವಿದೇಶಾಂಗ ಸಚಿವಾಲಯದ ವಕ್ತಾರ ಗೋಪಾಲ್ ಬಾಗ್ಲೆ ಈ ಮಾಹಿತಿ ಹಂಚಿಕೊಂಡರು.
ಗೃಹ ಸಚಿವ ರಾಜನಾಥ್ ಸಿಂಗ್ ಅವರ ನಿವಾಸದಲ್ಲಿ ನಡೆದ ಈ ಸಭೆಯಲ್ಲಿ ಕಾಂಗ್ರೆಸ್, ಎಡಪಕ್ಷಗಳು, ತೃಣಮೂಲ ಕಾಂಗ್ರೆಸ್, ಜೆಡಿಯು, ಸಮಾಜವಾದಿ ಪಕ್ಷ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರು ಪಾಲ್ಗೊಂಡಿದ್ದರು. ಅವರಿಗೆ ಹಣಕಾಸು ಸಚಿವ ಅರುಣ್ ಜೇಟ್ಲಿ, ಸುಷ್ಮಾ ಸ್ವರಾಜ್ ಮತ್ತು ರಾಜನಾಥ್ ಸಿಂಗ್, ವಿದೇಶಾಂಗ ಕಾರ್ಯದರ್ಶಿ ಜೈಶಂಕರ್ ಪ್ರಸಕ್ತ ಸ್ಥಿತಿಗತಿಗಳ ಬಗ್ಗೆ ವಿವರಣೆ ನೀಡಿದರು.