ಪರಿಹಾರ ಕ್ರಮಗಳನ್ನು ಹೆಚ್ಚಿಸಿದ ಅಸ್ಸಾಂ ಸರ್ಕಾರ

ಪ್ರವಾಹಪೀಡಿತ ಅಸ್ಸಾಂನಲ್ಲಿ ಜನಜೀವನವನ್ನು ಸಹಜ ಸ್ಥಿತಿಗೆ ತರುವ ಉದ್ದೇಶಕ್ಕಾಗಿ ಪರಿಹಾರ ಕ್ರಮಗಳನ್ನು ಹೆಚ್ಚಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಕೇಂದ್ರ ಆರೋಗ್ಯ ಇಲಾಖೆ 100 ಕೋಟಿ ರೂ ಬಿಡುಗಡೆ ಮಾಡಿದೆ ಎಂದು ರಾಜ್ಯ ಆರೋಗ್ಯ ಸಚಿವ ಹಿಮಾಂತ ಬಿಸ್ವಾ ಶರ್ಮ ಹೇಳಿದ್ದಾರೆ.
ಪರಿಹಾರ ಕ್ರಮ ಕೈಗೊಳ್ಳಲು ಹಣಕಾಸಿನ ಕೊರತೆ ಇಲ್ಲ. ಪ್ರವಾಹ ಪೀಡಿತ ಪ್ರದೇಶಗಳ ಉಪ ಆಯುಕ್ತರೊಂದಿಗೆ ರಾಜ್ಯದ ಮುಖ್ಯ ಕಾರ್ಯದರ್ಶಿ ಸಭೆ ನಡೆಸಿದ್ದಾರೆ. ಜನರಿಗೆ ಆರೋಗ್ಯ ಸೇವೆ ಮತ್ತು ಶುದ್ಧ ಕುಡಿಯುವ ನೀರಿನ್ನು ಒದಗಿಸಬೇಕೆಂದು ಸೂಚನೆ ನೀಡಲಾಗಿದೆ. ಪ್ರವಾಹಪೀಡಿತ ಪ್ರದೇಶಗಳ ಮಕ್ಕಳಿಗೆಂದು ಶಾಲಾ ಪುಸ್ತಕಗಳನ್ನು ಮರು ಮುದ್ರಣ ಮಾಡಿ ಹಂಚಲಾಗುವುದು ಎಂದು ಹೇಳಿದರು. ಪ್ರವಾಹದಿಂದಾಗಿ ಒಟ್ಟು 52 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.