ಗೋ ಹೆಸರಿನಲ್ಲಿ ದುಂಡಾವರ್ತಿ ನಡೆಸುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪ್ರಧಾನಿ ಮೋದಿ ಸೂಚನೆ

ಗೋ ರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ನಡೆಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಸೂಚಿಸಿದ್ದಾರೆ. ಈ ಬಗ್ಗೆ ರಾಜ್ಯ ಸರ್ಕಾರಗಳು ಸೂಕ್ತ ಕ್ರಮ ಕೈಗೊಳ್ಳುವಂತೆ ಮೋದಿ ಸೂಚಿಸಿದ್ದಾರೆ ಎಂದು ಸಂದೀಯ ವ್ಯವಹಾರಗಳ ಕಾರ್ಯದರ್ಶಿ ವೆಂಕಯ್ಯ ನಾಯ್ಡು ಹೇಳಿದ್ದಾರೆ. ಗೋ ರಕ್ಷಣೆ ಮಾಡಲು ಕಾನೂನು ಇದೆ. ಆದರೆ ಕಾನೂನನ್ನು ಕೈಗೆ ತೆಗೆದುಕೊಳ್ಳುವುದನ್ನು ಸಮ್ಮತಿಸಲಾಗದು.

ಇಂಥ ಸನ್ನಿವೇಶಕ್ಕೆ ರಾಜಕೀಯ ಮತ್ತು ಕೋಮು ದೃಷ್ಟಿಕೋನವನ್ನು ನೀಡುವ ಪ್ರಯತ್ನ ನಡೆದಿದೆ. ಇದರಿಂದ ದೇಶಕ್ಕೆ ಒಳಿತಾಗುವುದಿಲ್ಲ ಎಂದು ಮೋದಿ ಹೇಳಿದ್ದಾರೆ. ಅಲ್ಲದೆ ಭ್ರಷ್ಟಾಚಾರವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಜೊತೆಯಾಗುವಂತೆ ರಾಜಕೀಯ ಪಕ್ಷಗಳಿಗೆ ಅವರು ಕರೆ ನೀಡಿದ್ದಾರೆ.