ನವದೆಹಲಿಯಲ್ಲಿ ಜಿಎಸ್‌ಟಿ ಕೌನ್ಸಿಲ್ ಸಭೆ

ಸರಕು ಮತ್ತು ಸೇವಾ ತೆರಿಗೆ ಜಾರಿಗೆ ಬಂದು ಎರಡು ವಾರಗಳ ನಂತರದಲ್ಲಿ ಜಿಎಸ್‌ಟಿ ಕೌನ್ಸಿಲ್‌ ನವದೆಹಲಿಯಲ್ಲಿ ಇಂದು ಸಭೆ ಸೇರಿದೆ. ಈ ಸಭೆಯಲ್ಲಿ ಹೊಸ ತೆರಿಗೆ ಪದ್ಧತಿಯ ಅನುಷ್ಠಾನದ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ. ಜಿಎಸ್‌ಟಿ ಜಾರಿಗೊಳಿಸಿದ ನಂತರದಲ್ಲಿ ಇದೇ ಮೊದಲ ಬಾರಿಗೆ ಜಿಎಸ್‌ಟಿ ಕೌನ್ಸಿಲ್‌ ಸಭೆ ಕರೆಯಲಾಗಿದೆ.

ಹಣಕಾಸು ಸಚಿವ ಅರುಣ್‌ ಜೇಟ್ಲಿ ನೇತೃತ್ವದಲ್ಲಿ ವೀಡಿಯೋ ಕಾನ್ಫರೆನ್ಸ್‌ ಮೂಲಕ ಈ ಸಭೆ ನಡೆಯಲಿದೆ.