ಭ್ರಷ್ಟ ರಾಜಕಾರಣಿಗಳ ವಿರುದ್ಧ ಕ್ರಮ ಅಗತ್ಯ: ಪ್ರಧಾನಿ ಮೋದಿ

ರಾಜಕೀಯ ಷಡ್ಯಂತ್ರ ನಡೆಸಿ ತಮ್ಮನ್ನು ರಕ್ಷಿಸಿಕೊಳ್ಳುವ ರಾಜಕಾರಣಿಗಳ ವಿರುದ್ಧ ರಾಜಕೀಯ ಪಕ್ಷಗಳು ಕ್ರಮ ಕೈಗೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅಗ್ರಹಿಸಿದ್ದಾರೆ. ಮಳೆಗಾಲದ ಅಧಿವೇಶನಕ್ಕೂ ಮುನ್ನ ಸರ್ವಪಕ್ಷ ಸಭೆ ನಡೆಸಿದ ಅವರು, ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದು ಅತ್ಯಂತ ಅಗತ್ಯ. ಕಳೆದ ಕೆಲವು ದಶಕಗಳಿಂದ ರಾಜಕೀಯ ನಾಯಕತ್ವದ ಚಿತ್ರಣವು ನಮ್ಮಲ್ಲಿನ ಕೆಲವು ನಾಯಕರಿಂದಾಗಿ ಕುಸಿದಿದೆ.

ಪ್ರತಿಯೊಬ್ಬ ನಾಯಕರೂ ಕಳಂಕಿತರಲ್ಲ ಎಂಬುದನ್ನು ರಾಜಕೀಯ ನಾಯಕರು ಜನರಿಗೆ ತಿಳಿಸಬೇಕಾಗಿದೆ ಎಂದು ಅವರು ಹೇಳಿದ್ದಾರೆ.