ಸಂಸತ್ತು ಮತ್ತು ವಿಧಾನಸಭೆಗಳಲ್ಲಿ ಇಂದು ರಾಷ್ಟ್ರಪತಿ ಚುನಾವಣೆ

ಭಾರತದ ಮುಂದಿನ ರಾಷ್ಟ್ರಪತಿ ಆಯ್ಕೆಗೆ ಇಂದು ಚುನಾವಣೆ ನಡೆದಿದೆ. ಎನ್‌ಡಿಎ ಅಭ್ಯರ್ಥಿ ರಾಮನಾಥ್‌ ಕೋವಿಂದ್‌ ಮತ್ತು ವಿರೋಧ ಪಕ್ಷದ ಅಭ್ಯರ್ಥಿ ಮೀರಾ ಕುಮಾರ್‌ ಮಧ್ಯೆ ಸ್ಪರ್ಧೆಯಿದೆ.

ಮತ ಎಣಿಕೆಯನ್ನು ಗುರುವಾರ ನಡೆಸಲಾಗುತ್ತದೆ. ಹಾಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವಧಿ ಈ ತಿಂಗಳ 24ಕ್ಕೆ ಮುಕ್ತಾಯವಾಗಲಿದೆ. ಸಂಸತ್ತು ಹಾಗೂ ರಾಜ್ಯ ವಿಧಾನಸಭೆಗಳಲ್ಲಿ ಚುನಾವಣೆಗಾಗಿ ವಿಶೇಷ ವ್ಯವಸ್ಥೆ ಮಾಡಲಾಗಿದೆ.

ಲೋಕಸಭೆ, ರಾಜ್ಯಸಭೆ, ರಾಜ್ಯಗಳ ಶಾಸನ ಸಭೆ ಮತ್ತು ಕೇಂದ್ರಾಡಳಿತ ಪ್ರದೇಶಗಳಾದ ದೆಹಲಿ ಮತ್ತು ಪುದುಚೆರಿಯ ಶಾಸನಸಭೆಗಳ ಆಯ್ಕೆಯಾದ ಸದಸ್ಯರ ಮತಗಳ ಮೂಲಕ ರಾಷ್ಟ್ರಪತಿ ಆಯ್ಕೆ ನಡೆಯಲಿದೆ.