ಕ್ವಿಟ್ ಇಂಡಿಯಾ ಚಳವಳಿ: ಸ್ವಾತಂತ್ರ್ಯ ಹೋರಾಟಗಾರಿಗೆ ಅಭಿನಂದನೆ

ಕ್ವಿಟ್ ಇಂಡಿಯಾ ಚಳವಳಿ 75 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ದೇಶದ ಸ್ವಾತಂತ್ರ್ಯ ಹೋರಾಟಗಾರರಿಗೆ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಕಾರ್ಯಕ್ರಮ ಏರ್ಪಡಿಸಿದ್ದರು. ದೇಶದ ವಿವಿಧ ಭಾಗಗಳಿಂದ ಬಂದಿದ್ದ ಸುಮಾರು 93 ಸ್ವಾತಂತ್ರ್ಯ ಹೋರಾಟಗಾರರನ್ನು ಅವರು ಈ ಸಂದರ್ಭದಲ್ಲಿ ಅಭಿನಂದಿಸಿದರು. 
 
ಪ್ರತಿ ಹೋರಾಟಗಾರರಿಗೂ ಎಲೆಕ್ಟ್ರಿಕ್ ಕೆಟಲ್ ಜತೆಗೆ ರಾಷ್ಟ್ರಪತಿಗಳ ವೈಯಕ್ತಿಕ ಸಂದೇಶವಿದ್ದ ಪ್ರಮಾಣ ಪತ್ರ ನೀಡಲಾಯಿತು. ಈ ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ ರಾಷ್ಟ್ರಪತಿಗಳು, ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯಕ್ಕಾಗಿ ಶುಭಾ ಹಾರೈಕೆಗಳನ್ನು ತಿಳಿಸಿದರು.