ಇಂದಿನಿಂದ ಅಯೋಧ್ಯೆ ಭೂ ವಿವಾದ ಪ್ರಕರಣ ವಿಚಾರಣೆ ನಡೆಸಲಿರುವ ಮೂರು ನ್ಯಾಯಾಧೀಶರ ಸುಪ್ರೀಂಕೋರ್ಟ್‌ ಪೀಠ

ಅಯೋಧ್ಯಾ ಭೂ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲಹಾಬಾದ್‌ ಹೈಕೋರ್ಟ್‌ ತೀರ್ಪಿನ ಮೇಲ್ಮನವಿಯನ್ನು ಸುಪ್ರೀಂಕೋರ್ಟ್‌ ಪೀಠ ಇಂದಿನಿಂದ ವಿಚಾರಣೆ ನಡೆಸಲಿದೆ. ಪ್ರಕರಣದ ವಿಚಾರಣೆ ನಡೆಸಲು ನ್ಯಾಯಾಧೀಶ ದೀಪಕ್ ಮಿಶ್ರಾ ನೇತೃತ್ವದ ಮೂರು ನ್ಯಾಯಾಧೀಶರ ಪೀಠವನ್ನು ನಿಯೋಜಿಸಲಾಗಿದೆ. ನ್ಯಾಯಾಧೀಶರಾದ ಅಶೋಕ್ ಭೂಷಣ್‌ ಮತ್ತು ಅಬ್ದುಲ್ ನಜೀರ್‌ ಪೀಠದ ಇತರ ಸದಸ್ಯರಾಗಿದ್ದಾರೆ.

ಅಯೋಧ್ಯಾದಲ್ಲಿನ ವಿವಾದಿತ 2.77 ಎಕರೆ ಭೂಮಿಯನ್ನು ಮೂರು ಭಾಗವನ್ನಾಗಿಸಿ 2010ರಲ್ಲಿ ಅಲಹಾಬಾದ್‌ ಹೈಕೋರ್ಟ್‌ನ ಲಖನೌ ಪೀಠ ತೀರ್ಪು ನೀಡಿತ್ತು. ಮೂರೂ ಪಕ್ಷಗಳಾದ ಸುನ್ನಿ ವಕ್ಫ್‌ ಬೋರ್ಡ್‌, ನಿರ್ಮೋಹಿ ಅಖಾಡ ಮತ್ತು ರಾಮ್‌ ಲಲ್ಲಾಗೆ ಸಮಾನವಾಗಿ ಭೂಮಿ ಹಂಚಬೇಕು ಎಂದು ತೀರ್ಪು ನೀಡಿತ್ತು.