ಏಷ್ಯನ್ ಶಾಟ್ ಗನ್ ಚಾಂಪಿಯನ್ ಶಿಪ್ ನಲ್ಲಿ ಕಂಚು ಗೆದ್ದ ಮಹೇಶ್ವರಿ

ಶೂಟರ್ ಮಹೇಶ್ವರಿ ಚೌಹನ್ ಏಷ್ಯನ್ ಶಾಟ್ ಗನ್ ಚಾಂಪಿಯನ್ ಶಿಫ್ ನಲ್ಲಿ ಕಂಚಿನ ಪದಕ ಗೆದ್ದುಕೊಂಡಿದ್ದಾರೆ. ಅಸ್ಥಾನದಲ್ಲಿ ನಡೆದ ಪಂದ್ಯದಲ್ಲಿ ಈ ಸಾಧನೆ ಮಾಡುವ ಮೂಲಕ ಈ ಸಾಧನೆ ಮಾಡಿದ ಮೊದಲ ಭಾರತೀಯ ಮಹಿಳೆ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ.

ನಿನ್ನೆ ಮಹೇಶ್ವರಿ ಅವರು ರಶ್ಮಿ ರಾಥೋಡ್ ಮತ್ತು ಸಾನೀಯಾ ಶೇಕ್ ಅವರೊಂದಿಗೆ ಸೇರಿ ತಂಡ ಸ್ಪರ್ಧೆಯಲ್ಲಿ ಭಾರತಕ್ಕೆ ಬೆಳ್ಳಿ ಗೆದ್ದು ಕೊಟ್ಟಿದ್ದರು.

ಭಾರತವು  ಎರಡು ಚಿನ್ನ, ಒಂದು ಬೆಳ್ಳಿ ಮತ್ತು ಮೂರು ಕಂಚಿನ ಪದಕ ಗೆದ್ದುಕೊಂಡಿದೆ.