ಕಾಶ್ಮೀರದಲ್ಲಿ ಅಸ್ಥಿರತೆ ಮೂಡಿಸಲು ಪಾಕ್ ನಿಂದ ಹಣಕಾಸು ನೆರವು: ಸಮಿತಿ

ಸಂಸತ್ತಿನ ಸಮಿತಿಯೊಂದು ಕಾಶ್ಮೀರದ ಕೆಲವು ಭಾಗಗಳನ್ನು ಕಾನೂನು ಬಾಹಿರವಾಗಿ ಸ್ವಾಧೀನ ಪಡಿಸಿಕೊಂಡಿರುವುದು ಮಾತ್ರವಲ್ಲದೆ ಕಾಶ್ಮೀರ ಕಣಿವೆಯಲ್ಲಿ ಅಶಾಂತಿ ಸೃಷ್ಟಿಸಲು ಪಾಕ್ ಭಯೋತ್ಪಾದಕರಿಗೆ ಹಣಕಾಸು ನೆರವು ಮತ್ತು ಭಯೋತ್ಪಾದಕರಿಗೆ ನೆರವು ನೀಡುತ್ತಿದೆ ಎಂದು ಹೇಳಿದೆ.

ವಿದೇಶಾಂಗ ವ್ಯವಹಾರಗಳ ಸಮಿತಿಯು ನಿನ್ನೆ ಸಂಸತ್ತಿನಲ್ಲಿ ತನ್ನ ವರದಿಯನ್ನು ಮಂಡಿಸಿದ್ದು ಜಮ್ಮು ಮತ್ತು ಕಾಶ್ಮೀರದ ವಿಷಯದಲ್ಲಿ ಭಾರತದ ಬಗ್ಗೆ ಕೆಟ್ಟ ಅಭಿಪ್ರಾಯ ಬರುವಂತೆ ಮಾಡಲು ಪಾಕ್ ಶ್ರಮಿಸುತ್ತಿದೆ ಎಂದು ಹೇಳಿದೆ.

ಪಾಕ್ ತನ್ನ ತಪ್ಪನ್ನು ಸರಿಪಡಿಸಿಕೊಳ್ಳದಿದ್ದರೆ ಗಿಲ್ಗಿಟ್ – ಬಾಲ್ಟಿ ಸ್ತಾನ್ ಸೇರಿದಂತೆ ಪಾಕ್ ಆಕ್ರಮಿತ ಕಾಶ್ಮೀರದ ಮೇಲೆ ಭಾರತ ತನ್ನ ಹಕ್ಕನ್ನು ಪ್ರಬಲವಾಗಿ ಪ್ರತಿಪಾದಿಸಬೇಕು ಎಂದು ಸಮಿತಿ ಹೇಳಿದೆ.

ಸಂಸದ ಶಶಿ ತರೂರ್ ಈ ಸಮಿತಿಯ ಅಧ್ಯಕ್ಷರಾಗಿದ್ದರು.