ಭಾರತವು ತನ್ನ ಸರ್ವಾಂಗೀಣ ಪ್ರಗತಿಗಾಗಿ ಪ್ರಸಿದ್ಧ: ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್

ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಭಾರತವು ತನ್ನ ಪ್ರಬುಧ್ಧತೆ, ಯಶಸ್ವಿ ಪ್ರಜಾಪ್ರಭುತ್ವಕ್ಕೆ ಮಾತ್ರವಲ್ಲದೆ ತನ್ನ ಸರ್ವಾಂಗೀಣ ಪ್ರಗತಿಗೂ ಜನಪ್ರಿಯವಾಗಿದೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ.

ಕಾಠ್ಮಂಡುವಿನಲ್ಲಿನ ಭಾರತೀಯ ರಾಯಭಾರ ಕಚೇರಿಯಲ್ಲಿ ಭಾರತದ ಸ್ವಾತಂತ್ರ್ಯೋತ್ಸವದ 70ನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಅವರು ಮಾತನಾಡುತ್ತಿದ್ದರು. ಸ್ವಾತಂತ್ರ್ಯದ ನಂತರ ಪ್ರತಿಯೊಬ್ಬ ಪ್ರಧಾನಿಯೂ ದೇಶದ ಅಭಿವೃದ್ಧಿಗೆ ಕೊಡುಗೆ ನೀಡಿದ್ದಾರೆ ಎಂದು ಸ್ವರಾಜ್ ಹೇಳಿದ್ದಾರೆ.

ಭಾರತದ ಅಭಿವೃದ್ಧಿಯ ಲಾಭ ತನ್ನ ನೆರೆಯ ದೇಶಗಳಿಗೂ ಸಿಗುವಂತೆ ಆಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಬಯಸುತ್ತಾರೆ ಎಂದು ಹೇಳಿದರು. ನೇಪಾಳವು ಪ್ರಜಾಸತ್ತಾತ್ಮಕ ಸರ್ಕಾರವನ್ನು ಆರಿಸಿಕೊಂಡಿದ್ದಕ್ಕಾಗಿ ಸ್ವರಾಜ್ ನೇಪಾಳವನ್ನು ಅಭಿನಂದಿಸಿದ್ದಾರೆ.