ಭಾರತದ ಅಧಿಕೃತ ಪ್ರವಾಸ ಕೈಗೊಂಡಿರುವ ಬೆಲಾರಸ್ ಅಧ್ಯಕ್ಷ ಅಲೆಕ್ಸಾಂಡರ್ ಗ್ರಿಗೊರಿವಿಚ್ ಲುಕಶೆಂಕೊ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ಭೇಟಿ ಇಂದು. ಮಹತ್ವದ ವಿಷಯಗಳ ಕುರಿತು ಮಾತುಕತೆ

ಭಾರತದ ಅಧಿಕೃತ ಪ್ರವಾಸ ಕೈಗೊಂಡಿರುವ ಬೆಲಾರಸ್ ಅಧ್ಯಕ್ಷ ಅಲೆಕ್ಸಾಂಡರ್ ಗ್ರಿಗೊರಿವಿಚ್ ಲುಕಶೆಂಕೊ ಅವರು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ಕಡೆಸಲಿದ್ದಾರೆ.

ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಹಕಾರ ಸಂಬಂಧ ವೃದ್ಧಿ ಕುರಿತು ಉಭಯ ನಾಯಕರು ಮಹತ್ವದ ಮಾತುಕತೆ ನಡೆಸಲಿದ್ದಾರೆ.

ಉಭಯ ನಾಯಕರ ಭೇಟಿಯ ನಂತರ ಹೈದರಾಬಾದ್ ಹೌಸ್‌ನಲ್ಲಿ ಉನ್ನತ ನಿಯೋಗ ಮಟ್ಟದ ಮಾತುಕತೆ ನಡೆಯಲಿದೆ.

ಬೆಲಾರಸ್ ಅಧ್ಯಕ್ಷ ಅಲೆಕ್ಸಾಂಡರ್ ಗ್ರಿಗೊರಿವಿಚ್ ಲುಕಶೆಂಕೊ ಅವರು ನಿನ್ನೆ ರಾತ್ರಿ ನವದೆಹಲಿಗೆ ಆಗಮಿಸಿದ್ದಾರೆ.

ತಮ್ಮ ಎರಡು ದಿನಗಳ ಭೇಟಿಯ ವೇಳೆ ಲುಕಶೆಂಕೊ ಅವರು ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, ವಿದೇಶಾಂಗ ವ್ಯವಹಾರ ಸಚಿವೆ ಸುಷ್ಮಾ ಸ್ವರಾಜ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ.

ರಕ್ಷಣೆ, ಭದ್ರತೆ, ವ್ಯಾಪಾರ, ಬಂಡವಾಳ ಹೂಡಿಕೆ, ವಿಜ್ಞಾನ, ತಂತ್ರಜ್ಞಾನ, ಪರಸ್ಪರ ಮಾಹಿತಿ ವಿನಿಮಯ ಸೇರಿದಂತೆ ಇತರೆ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರ ಸಂಬಂಧ ವೃದ್ಧಿಸುವ ಕುರಿತು ಭಾರತ ಮತ್ತು ಬೆಲಾರಸ್ ನಡುವೆ ಮಾತುಕತೆ ನಡೆಯಲಿದೆ.

ಉಭಯ ರಾಷ್ಟ್ರಗಳ ಅಭಿವೃದ್ಧಿಗೆ ಪೂರಕವಾದ ಹಾಗೂ ಪರಸ್ಪರ ಹಿತಾಸಕ್ತಿಯ ಯೋಜನೆಗಳ ಒಪ್ಪಂದಗಳಿಗೆ ಸಹಿ ಹಾಕುವ ಸಾಧ್ಯತೆ ಇದೆ.