ಸ್ಟಾರ್ಟ್ ಅಪ್ ಯೋಜನೆಗಳಿಗೆ ಅನುಕೂಲವಾಗವಂಥ ವಾತಾವರಣ ಕಲ್ಪಿಸಲು ಹಾಗೂ ನವ ಉದ್ಯಮಗಳಿಗೆ ಉತ್ತೇಜನ ನೀಡಲು ವಾಣಿಜ್ಯ ಮತ್ತು ಕೈಗಾರಿಕೆ ಸಚಿವಾಲಯದಿಂದ ಸ್ಟಾರ್ಟ್ ಅಪ್ ಸಮಾವೇಶ

ಸ್ಟಾರ್ಟ್ ಅಪ್ ಯೋಜನೆಗಳಿಗೆ ಅನುಕೂಲವಾಗವಂಥ ವಾತಾವರಣ ಕಲ್ಪಿಸಲು ಹಾಗೂ ನವ ಉದ್ಯಮಗಳಿಗೆ ಉತ್ತೇಜನ ನೀಡಲು ವಾಣಿಜ್ಯ ಮತ್ತು ಕೈಗಾರಿಕೆ ಸಚಿವಾಲಯ ಸ್ಟಾರ್ಟ್ ಅಪ್ ಸಮಾವೇಶವನ್ನು ಆಯೋಜಿಸಿದೆ.

ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಸ್ಟಾರ್ಟ್ ಅಪ್ ಯೋಜನೆಗಳಿಗೆ ನೀಡಿರುವ ಉತ್ತೇಜನ ಕ್ರಮಗಳ ಕುರಿತು ಸಮಾವೇಶದಲ್ಲಿ ಚರ್ಚೆಯಾಗುವ ಸಾಧ್ಯತೆ ಇದೆ.

ಸ್ಟಾರ್ಟ್ ಅಪ್ ಯೋಜನೆಗಳಿಗೆ ನೀಡಿರುವ ಕ್ರಮದ ಆಧಾರದ ಮೇಲೆ ರ‍್ಯಾಂಕಿಂಗ್ ನೀಡುವ ಬಗ್ಗೆಯೂ ಚರ್ಚೆಯಾಗಲಿದೆ. ಈ ಕುರಿತು ನವದೆಹಲಿಯಲ್ಲಿ ಸಚಿವಾಲಯವು ಪ್ರಕಟಣೆ ಹೊರಡಿಸಿದೆ.

ಈ ಸಮಾವೇಶದಲ್ಲಿ ರಾಜ್ಯಗಳ ಪ್ರತಿನಿಧಿಗಳು, ಉದ್ಯಮಿಗಳು, ಏಜೆನ್ಸಿಗಳ ಪ್ರತಿನಿಧಿಗಳು ಸೇರಿದಂತೆ ಪ್ರಮುಖರು ಪಾಲ್ಗೊಳ್ಳಲಿದ್ದಾರೆ.