ಜಮ್ಮು ಮತ್ತು ಕಾಶ್ಮೀರದ ಪೂಂಚ್ ಹಾಗೂ ಜಮ್ಮುವಿನ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಗುಂಡಿನ ಚಕಮಕಿಯಲ್ಲಿ ಬಿಎಸ್‌ಎಫ್‌ನ ಇಬ್ಬರು ಯೋಧರು ಸೇರಿ ಐವರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಪಾಕಿಸ್ತಾನಿ ಯೋಧರು ಮತ್ತೆ ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿ ಮತ್ತು ಶೆಲ್ ದಾಳಿ ನಡೆಸಿದ್ದಾರೆ. ಬಿಎಸ್‌ಎಫ್‌ನ ಇಬ್ಬರು ಯೋಧರು ಸೇರಿದಂತೆ ಐವರು ಗಾಯಗೊಂಡಿದ್ದಾರೆ.

ನಿನ್ನೆ ಮಧ್ಯಾಹ್ನ ಜಮ್ಮು ಜಿಲ್ಲೆಯ ಅಖ್ನೂರ್ ಪ್ರದೇಶದ ಅಂತಾರಾಷ್ಟ್ರೀಯ ಗಡಿಭಾಗವಾದ ಪರಗ್ವಾಲ್ ವ್ಯಾಪ್ತಿಗೆ ಬಂದ ಪಾಕಿಸ್ತಾನಿ ಯೋಧರು ಗುಂಡಿನ ದಾಳಿ ನಡೆಸಿದರು.

ಇನ್ನೊಂದೆಡೆ ಪೂಂಚ್‌ನ ಮಂಕೊಟೆ, ಸಬ್‌ಜಿಯಾನ್, ದಿಗ್ವಾರ್ ಪ್ರದೇಶಗಳಲ್ಲಿ ಅಂಚೆ ಇಲಾಖೆಯ ಬಳಿ ಗುಂಡಿನ ದಾಳಿ ಹಾಗೂ ಶೆಲ್ ದಾಳಿ ನಡೆಸಿದ್ದಾರೆ.

ಭಾರತೀಯ ಯೋಧರು ಪ್ರತಿ ದಾಳಿ ನಡೆಸಿ ಪಾಕಿಸ್ತಾನಿ ಯೋಧರನ್ನು ಯಶಸ್ವಿಯಾಗಿ ಹಿಮ್ಮೆಟ್ಟಿಸಿದ್ದಾರೆ.

ಕಳೆದ ೫ ದಿನಗಳಲ್ಲಿ ಪಾಕಿಸ್ತಾನ ೪ನೇ ಬಾರಿಗೆ ನಿನ್ನೆ ಕದನ ವಿರಾಮ ಉಲ್ಲಂಘಿಸಿದೆ.