ರಾಜಧಾನಿ ದೆಹಲಿಯಲ್ಲಿನ ವಾಹನ ದಟ್ಟಣೆ ತಗ್ಗಿಸಲು ೩೪ ಸಾವಿರದ ೧೦೦ ಕೋಟಿ ರೂಪಾಯಿ ವೆಚ್ಚದಲ್ಲಿ ಹೆದ್ದಾರಿ ಅಭಿವೃದ್ಧಿ ಯೋಜನೆಗಳನ್ನು ಕೈಗೆತ್ತಿಕೊಳ್ಳಲಿರುವ ಕೇಂದ್ರ ಸರ್ಕಾರ

ರಾಜಧಾನಿ ದೆಹಲಿಯಲ್ಲಿ ವಾಹನ ದಟ್ಟಣೆ ತಗ್ಗಿಸಿ ಸಂಚಾರ ಸುಗಮಗೊಳಿಸುವ ನಿಟ್ಟಿನಲ್ಲಿ ಹೆದ್ದಾರಿ ಯೋಜನೆಗಳನ್ನು ೩೪ ಸಾವಿರದ ೧೦೦ ಕೋಟಿ ರೂಪಾಯಿ ವೆಚ್ಚದಲ್ಲಿ ಕೇಂದ್ರ ಸರ್ಕಾರವು ಕೈಗೆತ್ತಿಕೊಂಡಿದೆ.

ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ದೆಹಲಿಯಲ್ಲಿ ಸಭೆ ನಡೆಸಿ ಸುಗಮ ಸಂಚಾರ ಯೋಜನೆಯ ಕುರಿತು ಚರ್ಚಿಸಿದರು.

ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿ, ಈ ಕಾಮಗಾರಿಗೆ ದೆಹಲಿ ಸರ್ಕಾರದ ಸಹಕಾರ ಕೋರಿ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಇಲಾಖೆ ಸಚಿವ ಡಾ: ಹರ್ಷವರ್ಧನ್ ಪ್ರಯತ್ನಿಸುತ್ತಿದ್ದಾರೆ ಎಂದು ತಿಳಿಸಿದರು.