ಕಾರ್ತಿ ಚಿದಂಬರಂ ಅವರಿಗೆ ಸಂಬಂಧಪಟ್ಟ ಅಕ್ರಮ ವಿದೇಶಿ ಬ್ಯಾಂಕ್ ಖಾತೆಗಳು ಮತ್ತು ಆಸ್ತಿಗಳ ಕುರಿತು ಸಿಬಿಐ ಸಲ್ಲಿಸಿದ್ದ ದಾಖಲೆಗಳ ಕುರಿತು ಇಂದು ತನಿಖೆ ನಡೆಸಲಿರುವ ಸುಪ್ರೀಂ ಕೋರ್ಟ್

ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರ ವಿದೇಶಿ ಬ್ಯಾಂಕುಗಳಲ್ಲಿನ ಖಾತೆಗಳು ಮತ್ತು ಆಸ್ತಿಗಳ ಕುರಿತು ತನಿಖೆ ನಡೆಸಿ ಮುಚ್ಚಿದ ಲಕೋಟೆಯಲ್ಲಿ ಸಿಬಿಐ ಸಲ್ಲಿಸಿದ ದಾಖಲೆಗಳ ಬಗ್ಗೆ ಸುಪ್ರೀಂ ಕೋರ್ಟ್ ಇಂದು ಪರಿಶೀಲನೆ ನಡೆಸಲಿದೆ.
ಕಾರ್ತಿ ಚಿದಂಬರಂ ಅವರಿಗೆ ಸಂಬಂಧಪಟ್ಟ ವಿದೇಶಿ ಬ್ಯಾಂಕುಗಳಲ್ಲಿನ ಖಾತೆಗಳ ವಿವರ ಮತ್ತು ಆಸ್ತಿಗಳಿಗೆ ಸಂಬಂಧಪಟ್ಟ ದಾಖಲೆಗಳನ್ನು ಮುಚ್ಚಿದ ಲಕೋಟೆ ಒಳಗೊಂಡಿದೆ ಎಂದು ಸಿಬಿಐ, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರಿಗೆ ಹೇಳಿದೆ.
ಅಕ್ರಮ ಲಂಚ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾರ್ತಿ ಚಿದಂಬರಂ ವಿರುದ್ಧ ಸರ್ಕಾರ ಹೊರಡಿಸಿದ ಸುತ್ತೋಲೆಗೆ ಸಂಬಂಧಪಟ್ಟಂತೆ ಮದ್ರಾಸ್ ಹೈಕೋರ್ಟ್ ನೀಡಿದ್ದ ತಡೆಯಾಜ್ಞೆಯನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಮನವಿ ಕುರಿತು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.
ಕಾರ್ತಿ ಚಿದಂಬರಂ ಪರ ವಕೀಲರು ಸಿಬಿಐಯ ಮನವಿ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದು, ಸಿಬಿಐ ಸಲ್ಲಿಸಿದ ದಾಖಲೆಗಳು ಕೇಸಿಗೆ ಸಂಬಂಧಪಟ್ಟದ್ದಾಗಿಲ್ಲ. ಒಂದು ವೇಳೆ ಕೋರ್ಟ್ ವಿಚಾರಣೆ ನಡೆಸುವುದಿದ್ದರೆ ದಾಖಲೆಗಳನ್ನು ತಮ್ಮ ಪರ ಕಕ್ಷಿದಾರರಿಗೆ ತೋರಿಸಬೇಕು ಎಂದು ಹೇಳಿದ್ದರು.
ಈ ಪ್ರಕರಣದಲ್ಲಿ ಹಣದ ಅಕ್ರಮ ವರ್ಗಾವಣೆಯಾಗುತ್ತಿದ್ದು, ಹಲವು ಕಂಪೆನಿಗಳು ಮತ್ತು ಮಾಲಿಕರು ಇದರಲ್ಲಿ ಭಾಗಿಯಾಗಿದ್ದಾರೆ ಎಂದು ಸಿಬಿಐ ಪರ ವಕೀಲರು ಹೇಳಿದ್ದು, ಸಾಕ್ಷಿಗಳನ್ನು ನಾಶಪಡಿಸ