ಫಿಲಿಪ್ಪೀನ್ಸ್ ರಾಜಧಾನಿ ಮನಿಲಾದಲ್ಲಿ ನಡೆಯಲಿರುವ ಆಸಿಯಾನ್ ಶೃಂಗಸಭೆಯ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಗಿ

ಫಿಲಿಪ್ಪೀನ್ಸ್ ರಾಜಧಾನಿ ಮನಿಲಾದಲ್ಲಿ ನಡೆಯಲಿರುವ ಆಸಿಯಾನ್ ಶೃಂಗಸಭೆಯ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ. ನಂತರ ಅವರು ಫಿಲಿಪೈನ್ಸ್ ರಾಜಧಾನಿಯಲ್ಲಿನ ಅಂತಾರಾಷ್ಟ್ರೀಯ ಅಕ್ಕಿ ಸಂಶೋಧಾನಾ ಸಂಸ್ಥೆ ಮತ್ತು ಮಹಾವೀರ್ ಸಂಸ್ಥೆಗೆ ಭೇಟಿ ನೀಡಲಿದ್ದಾರೆ.

ವಾರ್ಷಿಕ ಶೃಂಗಸಭೆಯ ವೇಳೆ ಪ್ರಧಾನಿ ಮೋದಿ ಪಿಲಿಪ್ಪೀನ್ಸ್ ಅಧ್ಯಕ್ಷ ರೊನಾಲ್ಡೋ ಡುತೇರ್ಟ್, ಅಮೆರಿಕದ ಅಧಯಕ್ಷ ಡೊನಾಲ್ಡ್ ಟ್ರಂಪ್ ಸೇರಿದಂತೆ ಆಸಿಯಾನ್ ಮತ್ತು ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಪಾಲ್ಗೊಂಡಿರುವ ವಿಶ್ವನಾಯಕರನ್ನು ಭೇಟಿಯಾಗಲಿದ್ದಾರೆ.

ಪ್ರಧಾನಿ ಮೋದಿ ಇಂದು ಸಂಜೆ ಆಸಿಯಾನ್ ವ್ಯಾಪಾರ ಮತ್ತು ಬಂಡವಾಳ ಶೃಂಗಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ.