ಪ್ರಸಕ್ತ ದೇಶದ ರಾಜಕೀಯ ಸ್ಥಿತಿಗತಿ ವಿವರ ಪಡೆಯಲು ದೆಹಲಿಯಲ್ಲಿಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಾಗೂ ಪಕ್ಷದ ಪ್ರಧಾನ ಕಾರ‍್ಯದರ್ಶಿಗಳೊಂದಿಗೆ ಸಭೆ ನಡೆಸಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಾಗೂ ಪಕ್ಷದ ಪ್ರಧಾನ ಕಾರ‍್ಯದರ್ಶಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಪ್ರಧಾನಿ ಅವರು, ಪ್ರಸಕ್ತ ದೇಶದ ರಾಜಕೀಯ ಸ್ಥಿತಿಗತಿ ಕುರಿತಂತೆ ಮಾಹಿತಿ ಪಡೆಯುವ ನಿರೀಕ್ಷೆ ಇದೆ. ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪಕ್ಷವನ್ನು ಸಜ್ಜುಗೊಳಿಸುವ ಕಾರ‍್ಯತಂತ್ರ ರೂಪಿಸಲು ಈ ಸಭೆ ಕರೆಯಲಾಗಿದೆ. ಜೊತೆಗೆ ಸರ್ಕಾರ ಪೂರ್ಣ ಪ್ರಮಾಣದ ಬಜೆಟ್ ಮಂಡನೆಗೆ ಸಿದ್ದತೆ ನಡೆಸಿರುವ ಬಗ್ಗೆಯೂ ಚರ್ಚೆ ನಡೆಸುವ ನಿರೀಕ್ಷೆ ಇದೆ.ಮುಂದಿನ ತಿಂಗಳು ವಿಧಾನಸಭಾ ಚುನಾವಣೆ ನಡೆಯವ ಸಾಧ್ಯತೆ ಇರುವ ತ್ರಿಪುರಾ ಮತ್ತು ಮೇಘಾಲಯಗಳಲ್ಲಿ ಬಿಜೆಪಿ ಅಬ್ಬರದ ಪ್ರಚಾರದಲ್ಲಿ ತೊಡಗಿದೆ. ಕರ್ನಾಟಕದಲ್ಲಿ ಮೇ ತಿಂಗಳಲ್ಲಿ ವಿಧಾನಸಭಾ ಚುನಾವಣೆಗಳು ನಡೆಯುವ ಸಾಧ್ಯತೆ ಇದೆ.