ವಿವಿಧ ವಿಷಯಗಳ ಕುರಿತಂತೆ ಪ್ರತಿಪಕ್ಷಗಳ ಸದಸ್ಯರಿಂದ ಪ್ರತಿಭಟನೆ ; ಲೋಕಸಭೆ ಕಲಾಪ ದಿನದ ಮಟ್ಟಿಗೆ, ರಾಜ್ಯಸಭೆ ಕಲಾಪ ಮಧ್ಯಾಹ್ನ ೨ಕ್ಕೆ ಮುಂದೂಡಿಕೆ.

ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣ ಸೇರಿದಂತೆ ವಿವಿಧ ವಿಷಯಗಳ ಕುರಿತು ಪ್ರತಿಪಕ್ಷಗಳು ನಡೆಸಿದ ಪ್ರತಿಭಟನೆಗಳ ನಡುವೆ ಸಂಸತ್‌ನ ಉಭಯ ಸದನಗಳ ಕಲಾಪವನ್ನು ಮಧ್ಯಾಹ್ನದವರೆಗೆ ಮುಂದೂಡಲಾಗಿದೆ.

ಲೋಕಸಭೆಯಲ್ಲಿ ಪ್ರತಿಪಕ್ಷದ ಸದಸ್ಯರು ಘೋಷಣೆಗಳನ್ನು ಕೂಗುತ್ತಾ ಬಾವಿಗಿಳಿದು ಪ್ರತಿಭಟಿಸಲು ಯತ್ನಿಸಿದಾಗ ಸಭಾಧ್ಯಕ್ಷೆ ಸುಮಿತ್ರಾ ಮಹಾಜನ್  ಕಲಾಪವನ್ನು ಮುಂದೂಡಿದರು.

ಕಾಂಗ್ರೆಸ್ ಸದಸ್ಯರು ಸರ್ಕಾರದ ವಿರುದ್ಧ ಫಲಕಗಳನ್ನು ಹಿಡಿದು ಬಾವಿಗಿಳಿದು ಪ್ರತಿಭಟಿಸಲು ಯತ್ನಿಸಿದರು.

ರಾಜ್ಯಸಭೆಯಲ್ಲೂ ಪ್ರತಿಪಕ್ಷಗಳ ಪ್ರತಿಭಟನೆಯಿಂದಾಗಿ ಕಲಾಪವನ್ನು ಮುಂದೂಡಲಾಯಿತು.