ಕತುವಾ ಅತ್ಯಾಚಾರ ಸಂತ್ರಸ್ತೆಯ ಮಾಹಿತಿ ಬಹಿರಂಗಪಡಿಸಿದ ಮಾಧ್ಯಮ ಸಂಸ್ಥೆಗಳು, ಜಮ್ಮು-ಕಾಶ್ಮೀರ ಪರಿಹಾರ ನಿಧಿಗೆ ತಲಾ ೧೦ ಲಕ್ಷ ರೂಪಾಯಿ ನೀಡಬೇಕೆಂದು ದೆಹಲಿ ಹೈಕೋರ್ಟ್ ಸೂಚನೆ.

ಕತುವಾದಲ್ಲಿ ಅತ್ಯಾಚಾರಕ್ಕೆ ಬಲಿಯಾದ ೮ ವರ್ಷದ ಬಾಲಕಿಯ ಗುರುತನ್ನು ಬಹಿರಂಗ ಪಡಿಸಿದ ಹಿನ್ನೆಲೆಯಲ್ಲಿ ತಲಾ ೧೦ ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಮಾಧ್ಯಮ ಸಂಸ್ಥೆಗಳಿಗೆ ದೆಹಲಿ ಹೈಕೋರ್ಟ್ ಸೂಚನೆ ನೀಡಿದೆ.

ಅಲ್ಲದೇ ಈ ಸಂಬಂಧ ಮಾಧ್ಯಮ ಸಂಸ್ಥೆಗಳು ವಾರದೊಳಗೆ ಕ್ಷಮಾಪಣೆ ಕೇಳುವಂತೆ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಗೀತಾ ಮಿತ್ತಲ್ ಮತ್ತು ನ್ಯಾಯಮೂರ್ತಿ ಸಿ.ಹರಿಶಂಕರ್ ನೇತೃತ್ವದ ನ್ಯಾಯಪೀಠ ಸೂಚಿಸಿದೆ.

ಪರಿಹಾರದ ಹಣವನ್ನು ಜಮ್ಮು-ಕಾಶ್ಮೀರದ ಕಾನೂನು ಸೇವೆಗಳ ಪ್ರಾಧಿಕಾರದ ಖಾತೆಗೆ ವರ್ಗಾವಣೆ ಮಾಡುವಂತೆ ಸೂಚಿಸಲಾಗಿದೆ.