ದೇಶದ ಯಾವುದೇ ಭಾಗದಲ್ಲಿ ಕತುವಾದಂತಹ ಘಟನೆ, ನಾಚಿಕೆಗೇಡಿನ ಸಂಗತಿ ಮರುಕಳಿಸದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ – ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿಕೆ

ದೇಶದಲ್ಲೇ ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಮತ್ತು ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ಅಪರಾಧ ಚಟುವಟಿಕೆಗಳನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ.

ಜಮ್ಮುವಿನ ಕಟ್ರಾದಲ್ಲಿಂದು ಶ್ರೀ ಮಾತಾ ವೈಷ್ಣೋದೇವಿ ವಿಶ್ವವಿದ್ಯಾಲಯದಲ್ಲಿ ೬ನೇ ಘಟಿಕೋತ್ಸವದಲ್ಲಿ ಮಾತನಾಡಿದ ಅವರು, ದೇಶಕ್ಕೆ ಸ್ವಾತಂತ್ರ್ಯ ಬಂದ ೭೦ ವರ್ಷಗಳ ನಂತರದಲ್ಲಿ ಕತುವಾದಲ್ಲಿ ನಡೆದಿರುವ ಘಟನೆ ಖಂಡನೀಯ ಮತ್ತು ದೇಶ ನಾಚಿಕೆಪಡುವಂತ ಸಂಗತಿ ಎಂದು ಹೇಳಿದ್ದಾರೆ.

ಈ ರೀತಿಯ ಘಟನೆಗಳು ಮಹಿಳೆಯರು ಮತ್ತು ಮಕ್ಕಳ ಮೇಲೆ ಮುಂದಿನ ದಿನಗಳಲ್ಲಿ ನಡೆಯದಂತೆ ನೋಡಿಕೊಳ್ಳುವ ಅಗತ್ಯವಿದೆ ಎಂದು ಹೇಳಿದ ರಾಷ್ಟ್ರಪತಿಗಳು, ಇದೇ ವೇಳೆ ೭೦ ವಿದ್ಯಾರ್ಥಿಗಳಿಗೆ ಪದಕ ವಿತರಿಸಿದರು. ಎರಡು ದಿನಗಳ ಜಮ್ಮು-ಕಾಶ್ಮೀರದ ಪ್ರವಾಸದಲ್ಲಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನಾಳೆ ವೈಷ್ಟೋದೇವಿ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ.