ಐಪಿಎಲ್ ಕ್ರಿಕೆಟ್, ಕೋಲ್ಕತ್ತದ ಈಡನ್ ಗಾರ್ಡನ್‌ನಲ್ಲಿ ಇಂದು ರಾತ್ರಿ ನಡೆಯಲಿರುವ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ‍್ಸ್ ಹಾಗೂ ರಾಜಾಸ್ತಾನ್ ರಾಯಲ್ಸ್ ಮುಖಾಮುಖಿ

ಇಂದೋರ್‌ನಲ್ಲಿ ನಿನ್ನೆ ನಡೆದ ಐಪಿಎಲ್ ಕ್ರಿಕೆಟ್ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವನ್ನು ರಾಯಲ್ ಚಾಲೆಂಜರ‍್ಸ್ ಬೆಂಗಳೂರು ತಂಡ ೧೦ ವಿಕೆಟ್‌ಗಳಿಂದ ಮಣಿಸಿದೆ.

ಮೊದಲು ಬ್ಯಾಟ್ ಮಾಡಿದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ೧೫.೧ ಓವರ್‌ಗಳಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಕೇವಲ ೮೮ ರನ್‌ಗಳನ್ನಷ್ಟೇ ಗಳಿಸಿತ್ತು. ಇದಕ್ಕುತ್ತರವಾಗಿ ರಾಜಸ್ತಾನ್ ರಾಯಲ್ಸ್ ತಂಡ ೮.೧ ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೇ ೯೨ ರನ್ ಗಳಿಸಿತು.

ಆರ್‌ಸಿಬಿಗೆ ಈಗ ೧೨ ಪಂದ್ಯಗಳಿಂದ ೧೦ ಅಂಕ ಗಳಿಸಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಕ್ಕೆ ಸಮನಾಗಿದೆ.

ಇಂದು ರಾತ್ರಿ ಕೋಲ್ಕತ್ತದ ಈಡನ್ ಗಾರ್ಡನ್‌ನಲ್ಲಿ ನಡೆಯಲಿರುವ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ‍್ಸ್ ತಂಡ ಮತ್ತು ರಾಜಾಸ್ತಾನ್ ರಾಯಲ್ಸ್ ತಂಡ ಮುಖಾಮುಖಿಯಾಗಲಿವೆ.