ಕರ್ನಾಟಕ, ತಮಿಳುನಾಡು, ಕೇರಳ, ಗೋವಾ, ಮಹಾರಾಷ್ಟ್ರ, ಲಕ್ಷದ್ವೀಪ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಕರ್ನಾಟಕ, ತಮಿಳುನಾಡು, ಕೇರಳ, ಗೋವಾ, ಮಹಾರಾಷ್ಟ್ರ, ಲಕ್ಷದ್ವೀಪ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ ಎಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಯೆಮನ್‌ನ ಆದನ್‌ನಲ್ಲಿ ಸಾಗರ್ ಚಂಡಮಾರುತ ಬೀಸಲಿದ್ದು, ಇದರಿಂದ ದಕ್ಷಿಣ ರಾಜ್ಯಗಳ ಮೇಲೆ ಭಾರಿ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮುಂದಿನ ೨೪ ಗಂಟೆಗಳಲ್ಲಿ ಚಂಡುಮಾರುತ ಅಪ್ಪಳಿಸಿದ್ದು, ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಮುಂದಿನ ೪೮ ಗಂಟೆಗಳ ಕಾಲ ಅರಬ್ಬಿಸಮುದ್ರದಲ್ಲಿ ಮೀನುಗಾರಿಕೆಗೆ ಯಾರೂ ತೆರಳಬಾರದು ಎಂದು ಮುನ್ಸೂಚನೆ ನೀಡಲಾಗಿದೆ. ಕರಾವಳಿ ತೀರ ಹಾಗೂ ಸಮುದ್ರ ತೀರ ಪ್ರದೇಶಗಳ ಸಮೀಪದಲ್ಲಿರುವ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆಯೂ ಸೂಚಿಸಲಾಗಿದೆ.