ಪ್ರಧಾನಮಂತ್ರಿಗಳ ಹತ್ಯೆಗೆ ಮಾವೋವಾದಿಗಳಿಂದ ಸಂಚು ಹಿನ್ನೆಲೆ ; ನರೇಂದ್ರ ಮೋದಿ ಅವರಿಗೆ ಹೆಚ್ಚಿನ ಭದ್ರತೆ ನೀಡಲು ಗೃಹ ಸಚಿವಾಲಯದ ಆದೇಶ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹತ್ಯೆಗೆ ಮಾವೋವಾದಿಗಳು ಸಂಚು ರೂಪಿಸುತ್ತಿದ್ದಾರೆ ಎನ್ನುವ ಸುಳಿವಿನ ಹಿನ್ನೆಲೆಯಲ್ಲಿ ಗೃಹಸಚಿವಾಲಯ ಪ್ರಧಾನಮಂತ್ರಿಗಳಿಗೆ ಹೆಚ್ಚಿನ ಭದ್ರತೆಯನ್ನು ಒದಗಿಸಿದೆ.

ನರೇಂದ್ರ ಮೋದಿ ಅವರಿಗೆ ನೀಡಿರುವ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಸಂಬಂಧಪಟ್ಟ ಇತರ ಇಲಾಖೆಗಳೊಂದಿಗೆ ಸಮಾಲೋಚಿಸಿ ಎಲ್ಲಾ ಅಗತ್ಯ ಕ್ರಮಗಳನ್ನು ತುರ್ತಾಗಿ ಕೈಗೊಳ್ಳುವಂತೆ ಗೃಹಸಚಿವ ರಾಜನಾಥ್ ಸಿಂಗ್ ಆದೇಶಿಸಿದ್ದಾರೆ.

ನಿನ್ನೆ ಈ ಕುರಿತಂತೆ ಗೃಹಸಚಿವರು, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಗೃಹಕಾಂiiದರ್ಶಿ ರಾಜೀವ್ ಗೌಬಾ ಮತ್ತು ಬೇಹುಗಾರಿಕೆ ವಿಭಾಗದ ನಿರ್ದೇಶಕ ರಾಜೀವ್ ಜೈನ್ ಅವರೊಂದಿಗೆ ಸಭೆ ನಡೆಸಿ ಪ್ರಧಾನಮಂತ್ರಿಗಳಿಗೆ ಒದಗಿಸಲಾಗಿರುವ ಭದ್ರತಾ ವ್ಯವಸ್ಥೆಯ ಪರಾಮರ್ಶೆ ನಡೆಸಿದರು.