ಪಂಜಾಬ್‌ನ ಮಲೌಟ್‌ನಲ್ಲಿ ಇಂದು ಕಿಸಾನ್ ಕಲ್ಯಾಣ ರ್ಯಾyಲಿ ಉದ್ದೇಶಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಷಣ./

ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಪಂಜಾಬ್‌ನ ಮುಕ್ತಸರ್ ಜಿಲ್ಲೆಯ ಮಲೌಟ್‌ನಲ್ಲಿ ಏರ್ಪಡಿಸಿರುವ ಕಿಸಾನ್ ಕಲ್ಯಾಣ್ ರ್ಯಾಪಲಿಯನ್ನು ಪಾಲ್ಗೊಂಡಿದ್ದಾರೆ. ಪಂಜಾಬ್‌ನ ರೈತರು ದೇಶದ ಕೃಷಿ ವಲಯದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಪ್ರಧಾನಮಂತ್ರಿ ಟ್ವೀಟ್ ಮಾಡಿದ್ದಾರೆ.
ಕಳೆದ ನಾಲ್ಕು ವರ್ಷಗಳಲ್ಲಿ ಕೇಂದ್ರ ಸರ್ಕಾರ ಕೈಗೊಂಡ ಕೆಲವು ಕ್ರಮಗಳಿಂದಾಗಿ ದೇಶದ ರೈತರ ಆರ್ಥಿಕ ಪರಿಸ್ಥಿತಿ ಸುಧಾರಣೆಗೊಂಡಿದೆ ಎಂದು ನೀತಿ ಆಯೋಗದ ಸದಸ್ಯ ಪ್ರೊ. ರಮೇಶ್ ಚಂದ್ ತಿಳಿಸಿದ್ದಾರೆ.
೨೦೨೨ರ ವೇಳೆಗೆ ದೇಶದ ರೈತರ ಆದಾಯ ದ್ವಿಗುಣಗೊಳಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ನಿರ್ಧರಿಸಿದ್ದಾರೆ. ಇತ್ತೀಚೆಗಷ್ಟೇ ಕೇಂದ್ರ ಸರ್ಕಾರ, ಮುಂಗಾರು ಬೆಳೆಗಳಿಗೆ ಬೆಂಬಲ ಬೆಲೆ ಘೋಷಿಸಿದ್ದು, ಘೋಷಣೆಯ ಬಳಿಕ ಮೊದಲ ಬಾರಿಗೆ ರೈತರ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸುತ್ತಿದ್ದಾರೆ.
ಬಿಜೆಪಿಯ ಸಹಯೋಗದೊಂದಿಗೆ ಶಿರೋಮಣಿ ಅಕಾಲಿ ದಳ ಈ ಕೃತಜ್ಞತಾ ಸಮಾವೇಶವನ್ನು ಹಮ್ಮಿಕೊಂಡಿದೆ. ಈ ಸಮಾವೇಶದಲ್ಲಿ ಪಂಜಾಬ್, ಹರ್ಯಾಣ, ರಾಜಸ್ತಾನ ರಾಜ್ಯಗಳ ರೈತರು ಪಾಲ್ಗೊಂಡಿದ್ದಾರೆ. ಸ್ವಾಮಿನಾಥನ್ ಆಯೋಗದ ವರದಿ ಜಾರಿಗೆ ಕ್ರಮಕೈಗೊಂಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಕೃತಜ್ಞತೆ ಸಲ್ಲಿಸಲು ಈ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಎಸ್‌ಎಡಿ ಅಧ್ಯಕ್ಷ ಸುಕ್‌ಬೀರ್ ಸಿಂಗ್ ಬಾದಲ್ ತಿಳಿಸಿದ್ದಾರೆ. ಪ್ರಧಾನಮಂತ್ರಿಯವರು ರ್ಯಾ ಲಿಯಲ್ಲಿ ಪಾಲ್ಗೊಳ್ಳುತ್ತಿರುವುದರಿಂದ ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸಲಾಗಿದೆ.