ಲಂಡನ್‌ನ ಲಾರ್ಡ್ಸ್ ಕ್ರೀಡಾಂಗಣದಲ್ಲಿಂದು ಮಧ್ಯಾಹ್ನ ಭಾರತ – ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯ ಆರಂಭ.

ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಟೆಸ್ಟ್ ಕ್ರಿಕೆಟ್ ಪಂದ್ಯಗಳ ಸರಣಿಯ ಎರಡನೇ ಪಂದ್ಯ ಲಾರ್ಡ್ಸ್‌ನಲ್ಲಿಂದು ಆರಂಭವಾಗಲಿದೆ. ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ ೩.೩೦ಕ್ಕೆ ಪ್ರಾರಂಭವಾಗಲಿದ್ದು, ಇಂಗ್ಲೆಂಡ್ ಸರಣಿಯಲ್ಲಿ ಈಗಾಗಲೇ ೧-೦ ಯಿಂದ ಮುನ್ನಡೆ ಕಾಯ್ದುಕೊಂಡಿದೆ. ಬರ್ಮಿಂಗ್‌ಹ್ಯಾಂನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಆತಿಥೇಯರು ೩೧ರನ್‌ಗಳ ಗೆಲುವು ಸಾಧಿಸಿದ್ದರು. ನಂಬರ್ ಒನ್ ಸ್ಥಾನದಲ್ಲಿರುವ ಭಾರತ ತಂಡ ಮೊದಲ ಟೆಸ್ಟ್ ಪಂದ್ಯದಲ್ಲಿ ಸೋಲುಂಡಿರುವ ಹಿನ್ನೆಲೆಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳುವ ಸಾಧ್ಯತೆ ಇದೆ. ಚೇತೇಶ್ವರ ಪೂಜಾರ ಮತ್ತು ರವೀಂದ್ರ ಜಡೇಜಾ ಅವರು ೧೧ ಆಟಗಾರರ ತಂಡಕ್ಕೆ ಮರಳುವ ಸಾಧ್ಯತೆ ಇದೆ. ಇಂಗ್ಲೆಂಡ್ ತಂಡ ಲಾರ್ಡ್ಸ್‌ನಲ್ಲಿ ನಡೆದ ಕಳೆದ ೯ ಟೆಸ್ಟ್ ಪಂದ್ಯಗಳಲ್ಲಿ ಕೇವಲ ಮೂರು ಪಂದ್ಯಗಳನ್ನು ಜಯಿಸಿದೆ.