ದೆಹಲಿಯಲ್ಲಿಂದು ಮಹಾ ಲೆಕ್ಕಾಧಿಕಾರಿಗಳ ಸಮ್ಮೇಳನಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಚಾಲನೆ.

ರಾಷ್ಟ್ರಪತಿ ರಾಮನಾಥ್ ಕೋವಿಂದ್ ದೆಹಲಿಯಲ್ಲಿಂದು ಮಹಾ ಲೆಕ್ಕಾಧಿಕಾರಿಗಳ ಸಮ್ಮೇಳನಕ್ಕೆ ಚಾಲನೆ ನೀಡಲಿದ್ದಾರೆ. ಭಾರತೀಯ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ಆಯೋಜಿಸಿರುವ ಎರಡು ದಿನಗಳ ಈ ಸಮ್ಮೇಳನದಲ್ಲಿ ದೇಶದ ಎಲ್ಲ ಮಹಾ ಲೆಕ್ಕಾಧಿಕಾರಿಗಳು ಭಾಗವಹಿಸಲಿದ್ದಾರೆ.  ಸಾರ್ವಜನಿಕ ಲೆಕ್ಕ ಮತ್ತು ಖರ್ಚು ವಲಯದಲ್ಲಿ ಪಾರದರ್ಶಕತೆ ತರಲು ಮತ್ತು ಲೆಕ್ಕವನ್ನು ಇನ್ನಷ್ಟು ಉತ್ತಮ ಪಡಿಸಲು ಅತ್ಯಾಧುನಿಕ ಆಡಿಟ್ ತಂತ್ರಜ್ಞಾನ ಬಳಸುವ ಕುರಿತಂತೆ ಸಮ್ಮೇಳನದಲ್ಲಿ ಚರ್ಚೆಗಳು ನಡೆಯಲಿವೆ. ಸಮ್ಮೇಳನದ ಎರಡನೇ ದಿನದಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಭಾಷಣ ಮಾಡಲಿದ್ದಾರೆ. ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್, ಸಾರ್ವಜನಿಕ ಲೆಕ್ಕ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಭಾರತೀಯ ಕಂಟ್ರೋಲರ್ ಮತ್ತು ಆಡಿಟರ್ ಜನರಲ್  ರಾಜೀವ್ ಮೆಹರ್ಷಿ, ಮತ್ತಿತರರು ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.