ಇಂದಿನಿಂದ ಮೂರು ದಿನಗಳ ಫ್ರಾನ್ಸ್ ಪ್ರವಾಸ ಕೈಗೊಳ್ಳಲಿರುವ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್; ಭದ್ರತೆ ಮತ್ತು ರಕ್ಷಣೆ ಕುರಿತಂತೆ ಉಭಯ ದೇಶಗಳ ನಡುವಿನ ಸಂಬಂಧ ಉತ್ತೇಜಿಸುವ ನಿಟ್ಟಿನಲ್ಲಿ ಮಾತುಕತೆ

ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಇಂದಿನಿಂದ ಮೂರು ದಿನಗಳ ಫ್ರಾನ್ಸ್ ಪ್ರವಾಸ ಕೈಗೊಳ್ಳಲಿದ್ದಾರೆ. ಈ ವೇಳೆ ಭದ್ರತೆ ಮತ್ತು ರಕ್ಷಣೆಗೆ ಸಂಬಂಧಿಸಿದಂತೆ ಉಭಯ ದೇಶಗಳ ನಡುವೆ ಈಗಾಗಲೇ ಇರುವ ಸಂಬಂಧಗಳನ್ನು ಇನ್ನಷ್ಟು ಉತ್ತೇಜಿಸುವ ನಿಟ್ಟಿನಲ್ಲಿ ಮಾತುಕತೆ ನಡೆಸುವ ಸಾಧ್ಯತೆ ಇದೆ.

ಸೀತಾರಾಮನ್ ಅವರು ಫ್ರಾನ್ಸ್‌ನ ವಿದೇಶಾಂಗ ಸಚಿವರಾದ ಫ್ಲಾರೆನ್ಸ್ ಪಾರ್ಲೆ ಅವರೊಂದಿಗೆ ವಿಸ್ತೃತ ಸಮಾಲೋಚನೆ ನಡೆಸಲಿದ್ದು, ಪರಸ್ಪರ ಹಿತಾಸಕ್ತಿಯ ಹಲವು ಜಾಗತಿಕ ಹಾಗೂ ಪ್ರಾದೇಶಿಕ ವಿಷಯಗಳ ಕುರಿತಂತೆ ಚರ್ಚೆ ನಡೆಸುವ ಜೊತೆಗೆ ದ್ವಿಪಕ್ಷಿಯ ಕಾರ್ಯತಂತ್ರ ಸಹಕಾರವನ್ನು ಮುಂದುವರಿಸುವ ಬಗ್ಗೆ ಚರ್ಚಿಸುವರು.

ಮಾತುಕತೆ ವೇಳೆ ಸೀತಾರಾಮನ್ ಹಾಗೂ ಪಾರ್ಲೆ ಅವರು, ಉಭಯ ದೇಶಗಳ ನಡುವಿನ ಮಿಲಿಟರಿ ವೇದಿಕೆ ಮತ್ತು ಶಸ್ತ್ರಾಸ್ತ್ರಗಳ ಜಂಟಿ ಉತ್ಪಾದನೆ ಕುರಿತು ಮಾತುಕತೆ ನಡೆಸುವ ನಿರೀಕ್ಷೆ ಇದೆ.

ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುಯಲ್ ಮಕ್ರಾನ್ ಕಳೆದ ಮಾರ್ಚ್‌ನಲ್ಲಿ ಭಾರತ ಪ್ರವಾಸ ಕೈಗೊಂಡಿದ್ದ ವೇಳೆ ಉಭಯ ದೇಶಗಳು ದ್ವಿಪಕ್ಷೀಯ ಸಂಬಂಧಗಳ ವಿಸ್ತರಣೆ ಮತ್ತು ಭಯೋತ್ಪಾದನೆ ನಿಗ್ರಹ ಸಹಕಾರ ಬಲವರ್ಧನೆಗೆ ನಿರ್ಧರಿಸಿದ್ದವು.