ಐಎನ್‌ಎಕ್ಸ್ ಪ್ರಕರಣ ಸಂಬಂಧ ಕಾರ್ತಿ ಚಿದಂಬರಂ ಒಡೆತನದ ೫೪ ಕೋಟಿ ರೂಪಾಯಿ ಮೌಲ್ಯದ ಸ್ಥಿರಾಸ್ತಿ, ಜಾರಿ ನಿರ್ದೇಶನಾಲಯದಿಂದ ಜಪ್ತಿ.

ಐಎನ್‌ಎಕ್ಸ್ ಪ್ರಕರಣ ಸಂಬಂಧ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಒಡೆತನದ ೫೪ ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ವಶಪಡಿಸಿಕೊಂಡಿದೆ. ಅವರ ಈ ಸ್ಥಿರಾಸ್ತಿಗಳು ಭಾರತ, ಸ್ಪೇನ್ ಮತ್ತು ಬ್ರಿಟನ್ ದೇಶಗಳಲ್ಲಿ ಇರುವುದಾಗಿ ನಿರ್ದೇಶನಾಲಯ ಮಾಹಿತಿ ನೀಡಿದೆ.  ಐಎನ್‌ಎಕ್ಸ್ ಮೀಡಿಯಾ ಪ್ರಕರಣ ಸಂಬಂಧ ತನಿಖೆ ಪ್ರಗತಿಯಲ್ಲಿದ್ದು, ಅದರ ಭಾಗವಾಗಿ ಈ ಕ್ರಮ ಕೈಗೊಂಡಿರುವುದಾಗಿ ನಿರ್ದೇಶನಾಲಯ ತಿಳಿಸಿದೆ. ಈ ವಿದ್ಯಮಾನವನ್ನು ಕಾರ್ತಿ ಚಿದಂಬರಂ ಟೀಕಿಸಿದ್ದಾರೆ.