ಜಿಂಬಾಬ್ವೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ೪೭ ಮಂದಿ ಸಾವು

ಜಿಂಬಾಬ್ವೆ ರಾಜಧಾನಿ ಹರಾರೆ ಸಮೀಪದ ಪೂರ್ವ ರುಷೇಬ್ ಪಟ್ಟಣದಲ್ಲಿ ೨ ಬಸ್‌ಗಳ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ೪೭ ಮಂದಿ ಮೃತಪಟ್ಟಿದ್ದಾರೆ ಎಂದು ಅಲ್ಲಿನ ಪೊಲೀಸರು ತಿಳಿಸಿದ್ದಾರೆ. ಜಿಂಬಾಬ್ವೆಯಲ್ಲಿ ರಸ್ತೆ ಅಪಘಾತಗಳು ಸಾಮಾನ್ಯವಾಗುತ್ತಿದ್ದು, ರಸ್ತೆ ನಿಯಮಗಳನ್ನು ಪಾಲಿಸುವಲ್ಲಿ ಸಾರ್ವಜನಿಕರು ಮತ್ತು ಖಾಸಗಿ ವಾಹನಗಳು ನಿರ್ಲಕ್ಷ್ಯ ತೋರುತ್ತಿದ್ದು, ಹೆದ್ದಾರಿಗಳಲ್ಲಿ ಅಪಘಾತಗಳು ಸಂಭವಿಸುತ್ತಿವೆ ಎಂದು ಮೂಲಗಳು ತಿಳಿಸಿವೆ.