ಎಲ್‌ಪಿಜಿ ಸಿಲಿಂಡರ್ ಬೆಲೆ ೫ ರೂಪಾಯಿ ೯೧ ಪೈಸೆ ಇಳಿಕೆ

ಹೊಸ ವರ್ಷದ ಮುನ್ನಾ ದಿನ ಎಲ್‌ಪಿಜಿ ಸಿಲಿಂಡರ್ ಬೆಲೆ ೫.೯೧ ರೂಪಾಯಿ ಕಡಿಮೆಯಾಗಿದೆ. ಸಬ್ಸಿಡಿ ರಹಿತ ಸಿಲಿಂಡರ್ ಬೆಲೆ ಕೂಡ ಇಳಿಕೆಯಾಗಿದೆ.  ಅಂತಾರಾಷ್ಟ್ರೀಯ ಮಾರುಕಟ್ಟೆಯ ಬೆಲೆಗಳಿಗೆ ಅನುಗುಣವಾಗಿ ಸಿಲಿಂಡರ್ ಬೆಲೆ ಇಳಿಕೆಯಾಗಿದೆ. ಕಳೆದ ತಿಂಗಳಿನಲ್ಲಿ ಸತತ ಎರಡನೇ ಬಾರಿಗೆ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಇಳಿಕೆಯಾಗಿದೆ. ೧೪.೨ ಕೆಜಿ ತೂಕದ ಎಲ್‌ಪಿಜಿ ಸಿಲಿಂಡರ್ ನವದೆಹಲಿಯಲ್ಲಿ ೪೯೪ ರೂಪಾಯಿ ೯೯ ಪೈಸೆಯಾಗಿದೆ. ಸದ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ ೫೦೦ ರೂಪಾಯಿ ೯೦ ಪೈಸೆ ಇದೆ. ಇನ್ನು ಸಬ್ಸಿಡಿ ರಹಿತ ಸಿಲಿಂಡರ್ ಬೆಲೆ ಕೂಡ ಕಡಿಯೆಮಾಗಿದೆ. ಸಬ್ಸಿಡಿ ರಹಿತ ಸಿಲಿಂಡರ್ ಬೆಲೆ ೧೨೦ ರೂಪಾಯಿ ೫೦ ಪೈಸೆಯಾಗಿದೆ. ಮುಂದಿನ ದಿನಗಳಲ್ಲಿ ಇನ್ನು ದರ ಪರಿಷ್ಕರಣೆಯಾಗುವ ಸಾಧ್ಯತೆ ಇದೆ. ಅಮೆರಿಕ ಡಾಲರ್‌ಎದುರು ರೂಪಾಯಿ ಮೌಲ್ಯ ಚೇತರಿಕೆ ಹಾಗೂ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ದರಗಳ ಇಳಿಕೆಯಿಂದಾಗಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಕಡಿಮೆಯಾಗಿದೆ.