ನೂತನ ರಚಿತ ತೆಲಂಗಾಣ ಉಚ್ಚನ್ಯಾಯಾಲಯದ ಮುಖ್ಯನ್ಯಾಯಾಧೀಶರಾಗಿ ನ್ಯಾಯಮೂರ್ತಿ ಟಿ.ಬಿ.ಎನ್.ರಾಧಾಕೃಷ್ಣನ್ ಪ್ರಮಾಣ ವಚನ ಸ್ವೀಕಾರ.

ಹೊಸದಾಗಿ ಆರಂಭಗೊಂಡ ತೆಲಂಗಾಣ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರಾಗಿ ನ್ಯಾಯಮೂರ್ತಿ ಟಿ.ಬಿ.ಎನ್. ರಾಧಾಕೃಷ್ಣನ್ ಅವರು ಇಂದು ಬೆಳಗ್ಗೆ ಪ್ರಮಾಣ ವಚನ ಸ್ವೀಕರಿಸಿದರು.
ತೆಲಂಗಾಣ ಮತ್ತು ಆಂಧ್ರಪ್ರದೇಶದ ರಾಜ್ಯಪಾಲರಾದ ಇಎಸ್‌ಎಲ್ ನರಸಿಂಹನ್ ಅವರು ಪ್ರಮಾಣವಚನ ಬೋಧಿಸಿದರು.
ಕೇಂದ್ರ ಸರ್ಕಾರದ ಅಧಿಸೂಚನೆ ಹಿನ್ನೆಲೆಯಲ್ಲಿ ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಇಂದಿನಿಂದ ಪ್ರತ್ಯೇಕವಾಗಿ ಹೈಕೋರ್ಟ್‌ಗಳು ಕಾರ್ಯ ನಿರ್ವಹಿಸಲಿವೆ.
ಹೈದರಾಬಾದ್‌ನ ರಾಜಭವನದಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್, ತೆಲಂಗಾಣದ ನ್ಯಾಯಮೂರ್ತಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.