ಜಮ್ಮು ಮತ್ತು ಕಾಶ್ಮೀರದ ಗುಲ್‌ಶನ್‌ಪೋರಾತ್ರಾಲ್‌ನಲ್ಲಿ ಭಯೋತ್ಪಾದಕರೊಂದಿಗೆ ಭದ್ರತಾ ಪಡೆಗಳ ಗುಂಡಿನ ಚಕಮಕಿ; ಇಬ್ಬರು ಉಗ್ರರ ಹತ್ಯೆ.

ಜಮ್ಮು ಮತ್ತು ಕಾಶ್ಮೀರದ ಗುಲ್‌ಶನ್‌ಪೋರಾ ತ್ರಾಲ್‌ನಲ್ಲಿ ಇಂದು ಮುಂಜಾನೆ ಭಯೋತ್ಪಾದಕರೊಂದಿಗೆ ಭದ್ರತಾ ಪಡೆಯ ಯೋಧರು ಗುಂಡಿನ ಚಕಮಕಿ ನಡೆಸಿದ್ದು, ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಈ ಚಕಮಕಿಯಲ್ಲಿ ಮೂವರು ಭಾರತೀಯ ಯೋಧರು ತೀವ್ರವಾಗಿ ಗಾಯಗೊಂಡಿರುವುದಾಗಿ ವರದಿಯಾಗಿದೆ. ಅವರಿಗೆ ಶ್ರೀನಗರದ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಭಯೋತ್ಪಾದಕರ ಶವಗಳನ್ನು ಭದ್ರತಾ ಪಡೆಗಳು ವಶಪಡಿಸಿಕೊಂಡಿದ್ದು, ಆ ಪ್ರದೇಶದಲ್ಲಿ ಇನ್ನೂ ಅಡಗಿರಬಹುದಾದ ಉಗ್ರರಿಗಾಗಿ ತೀವ್ರ ಶೋಧ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಹೆಚ್ಚಿನ ವಿವರಗಳಿಗಾಗಿ ಎದುರು ನೋಡಲಾಗುತ್ತಿದೆ.