ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ ಉತ್ತಮ ರೀತಿಯಲ್ಲಿ ಅನುಷ್ಠಾನಗೊಳಿಸಲು ರಾಷ್ಟ್ರೀಯ ಆರೋಗ್ಯ ಏಜೆನ್ಸಿಯನ್ನು ಪುನರ್ ರಚಿಸಿ ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರವನ್ನಾಗಿ ಮಾಡಲು ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ದೆಹಲಿಯಲ್ಲಿ ನಿನ್ನೆ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಕಾನೂನು ಮತ್ತು ನ್ಯಾಯ ಸಚಿವ ರವಿಶಂಕರ್ ಪ್ರಸಾದ್, ಕೇಂದ್ರ ಆರೋಗ್ಯ ಸಚಿವರು ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರದ ಅಧ್ಯಕ್ಷರಾಗಿರುತ್ತಾರೆ; ಅವರು ಯೋಜನೆಯ ಸುಗಮ ಹಾಗೂ ತ್ವರಿತ ಅನುಷ್ಠಾನಕ್ಕೆ ಅಗತ್ಯ ನೀತಿ ನಿರ್ಧಾರಗಳನ್ನು ಕೈಗೊಳ್ಳಲಿದ್ದಾರೆ ಎಂದರು. ಪರಿಣಾಮಕಾರಿ ಮತ್ತು ಪಾರದರ್ಶಕ ನಿರ್ಧಾರ ಪ್ರಕ್ರಿಯೆ ಮೂಲಕ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಯ ಅನುಷ್ಠಾನದ ಸಂಪೂರ್ಣ ಹೊಣೆ ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರದ್ದಾಗಿದೆ ಎಂದು ಅವರು ಹೇಳಿದರು.