ಎರಡು ದಿನಗಳ ಬಿಜೆಪಿ ರಾಷ್ಟ್ರೀಯ ಕಾರ‍್ಯಕಾರಿಣಿ ಸಭೆ ನವದೆಹಲಿಯಲ್ಲಿ ಇಂದಿನಿಂದ ಆರಂಭ

ಎರಡು ದಿನಗಳ ಬಿಜೆಪಿ ರಾಷ್ಟ್ರೀಯ ಕಾರ‍್ಯಕಾರಿಣಿ ಸಭೆ ನವದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ಇಂದಿನಿಂದ ಆರಂಭವಾಗಲಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸಭೆಯನ್ನು ಉದ್ಘಾಟಿಸಲಿದ್ದಾರೆ.

ನವದೆಹಲಿಯಲ್ಲಿ ನಿನ್ನೆ ಈ ಬಗ್ಗೆ ವಿವರ ನೀಡಿದ್ದ ಪಕ್ಷದ ಯುವ ಮೊರ್ಚಾದ ಅಧ್ಯಕ್ಷರಾದ ಪೂನಂ ಮಹಾಜನ್, ದೇಶದ ನಾನಾ ಭಾಗಗಳ ಸುಮಾರು ೧೨ ಸಾವಿರ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.

ಪ್ರಧಾನಮಂತ್ರಿ ನರೇಂದ್ರಮೋದಿ ಅವರು ನಾಳೆ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಈ ಮಧ್ಯೆ, ಬಿಜೆಪಿ ಅಧ್ಯಕ್ಷ ಅಮಿತ್ ಶಾ, ಮಾಜಿ ಮುಖ್ಯಮಂತ್ರಿಗಳಾದ ಶಿವರಾಜ್ ಸಿಂಗ್ ಚೌವ್ಹಾಣ್, ರಮಣ್ ಸಿಂಗ್ ಮತ್ತು ವಸುಂಧರಾ ರಾಜೇ ಅವರನ್ನು ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ ಎಂದು ಪಕ್ಷದ ಪ್ರಧಾನ ಕಾರ‍್ಯದರ್ಶಿ ಅರುಣ್ ಸಿಂಗ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.