ಬಿಜೆಪಿ ರಾಷ್ಟ್ರೀಯ ಕಾರ‍್ಯಕಾರಿಣಿ ಸಭೆ ದೆಹಲಿಯಲ್ಲಿ ಇಂದಿನಿಂದ ಆರಂಭ

ಬಿಜೆಪಿ ರಾಷ್ಟ್ರೀಯ ಕಾರ‍್ಯಕಾರಿಣಿ ಸಭೆ ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ಇಂದಿನಿಂದ ಆರಂಭವಾಗಲಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸಭೆಯನ್ನು ಉದ್ಘಾಟಿಸಲಿದ್ದಾರೆ. ದೆಹಲಿಯಲ್ಲಿ ನಿನ್ನೆ ಈ ಬಗ್ಗೆ ವಿವರ ನೀಡಿದ್ದ ಪಕ್ಷದ ಯುವ ಮೋರ್ಚಾ ಅಧ್ಯಕ್ಷರಾದ ಪೂನಂ ಮಹಾಜನ್, ದೇಶದ ನಾನಾ ಭಾಗಗಳ ಸುಮಾರು ೧೨ ಸಾವಿರ ಪ್ರತಿನಿಧಿಗಳು ೨ ದಿನ ನಡೆಯುವ ಈಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದರು. ಪ್ರಧಾನಮಂತ್ರಿ ನರೇಂದ್ರಮೋದಿ ಅವರು ನಾಳೆ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು ಸೇರಿದಂತೆ ಎಲ್ಲ ಸಂಸದರು ಹಾಗೂ ಪಕ್ಷದ ಪ್ರಮುಖ ನಾಯಕರು ಸಭೆಯಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಲಾಗಿದೆ ಎಂದು ನಮ್ಮ ಬಾತ್ಮೀದಾರರು ವರದಿ ಮಾಡಿದ್ದಾರೆ.