ಸಣ್ಣ ಪ್ರಮಾಣದ ವಹಿವಾಟಿಗೆ ಸಂಬಂಧಿಸಿದಂತೆ ಜಿಎಸ್‌ಟಿ ಮಂಡಳಿ ಕೈಗೊಂಡಿರುವ ನಿರ್ಧಾರದಿಂದ ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ವಲಯದ ಕೈಗಾರಿಕೆಗಳು, ವರ್ತಕರು ಹಾಗೂ ಸೇವಾ ವಲಯಕ್ಕೆ ಹೆಚ್ಚಿನ ಅನುಕೂಲ – ಪ್ರಧಾನಮಂತ್ರಿ ನರೇಂದ್ರ ಮೋದಿ

ಸಣ್ಣ ಪ್ರಮಾಣದ ವಹಿವಾಟಿಗೆ ಸಂಬಂಧಿಸಿದಂತೆ ಜಿಎಸ್‌ಟಿ ಮಂಡಳಿ ಕೈಗೊಂಡಿರುವ ನಿರ್ಧಾರದಿಂದ ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ವಲಯದ ಕೈಗಾರಿಕೆಗಳು, ವರ್ತಕರು ಹಾಗೂ ಸೇವಾ ವಲಯಕ್ಕೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅಧ್ಯಕ್ಷತೆಯಲ್ಲಿ ನವದೆಹಲಿಯಲ್ಲಿ ನಿನ್ನೆ ನಡೆದ ಜಿಎಸ್‌ಟಿ ಮಂಡಳಿಯ ಸಭೆಯಲ್ಲಿ, ಪ್ರಸ್ತುತ ಸರಕು ಮತ್ತು ಸೇವಾ ತೆರಿಗೆ – ಜಿಎಸ್‌ಟಿ ಅಡಿ ನೋಂದಾಯಿಸಿಕೊಳ್ಳಲು ಇರುವ ವಾರ್ಷಿಕ ವಹಿವಾಟಿನ ೨೦ ಲಕ್ಷ ರೂಪಾಯಿ ಮಿತಿಯನ್ನು ೪೦ ಲಕ್ಷ ರೂಪಾಯಿಗೆ ಹೆಚ್ಚಿಸಲಾಗಿದೆ. ಸಣ್ಣ ಪ್ರಮಾಣದ ವಹಿವಾಟು ನಡೆಸುವವರಿಗೆ ಇದು ಪ್ರಯೋಜನವಾಗಲಿದೆ. ಈಶಾನ್ಯ ರಾಜ್ಯಗಳಿಗೆ ಹೊರತುಪಡಿಸಿ ಉಳಿದೆಲ್ಲಾ ರಾಜ್ಯಗಳಿಗೆ ವಾರ್ಷಿಕ ವಹಿವಾಟು ಮಿತಿಯನ್ನು ೪೦ ಲಕ್ಷ ರೂಪಾಯಿಗೆ ಹೆಚ್ಚಿಸಲಾಗಿದೆ. ಅಲ್ಲದೆ, ಏಪ್ರಿಲ್ ೧ರಿಂದ ಜಾರಿಗೆ ಬರುವಂತೆ ವಾರ್ಷಿಕ ಒಂದೂವರೆ ಕೋಟಿ ರೂಪಾಯಿವರೆಗಿನ ವಹಿವಾಟು ಹೊಂದಿರುವ ಸಣ್ಣ ವರ್ತಕರು ಹಗೂ ವಾಣಿಜ್ಯೋದ್ಯಮಿಗಳಿಗೆ ಕಾಂಪೊಸಿಷನ್ ವ್ಯವಸ್ಥೆಯಡಿ ನೋಂದಾಯಿಸಲು ಅವಕಾಶ ಕಲ್ಪಿಸುವ ನಿರ್ಧಾರವನ್ನು ಜಿಎಸ್‌ಟಿ ಮಂಡಳಿ ಕೈಗೊಂಡಿದೆ. ಈ ಮೊದಲು ಈ ಮಿತಿ ಒಂದು ಲಕ್ಷ ರೂಪಾಯಿಯಷ್ಟಿತ್ತು.

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಟ್ವೀಟ್‌ನಲ್ಲಿ, ಜಿಎಸ್‌ಟಿ ನಿರ್ಧಾರಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ತಮ್ಮ ಸರ್ಕಾರ ಸರಳ ಮತ್ತು ಜನಸ್ನೇಹಿ ಜಿಎಸ್‌ಟಿಗೆ ಬದ್ಧವಾಗಿದೆ ಎಂದು ಹೇಳಿದ್ದಾರೆ