ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಮುಚ್ಚಿದ ಹಿನ್ನಲೆಯಲ್ಲಿ ಅವಳಿ ರಾಜಧಾನಿಗಳಲ್ಲಿ ಸಿಲುಕಿದ್ದ ೫೩೮ ಜನರನ್ನು ಹೆಲಿಕಾಪ್ಟರ್‌ಗಳ ಮೂಲಕ ರಕ್ಷಿಸಿದ ಭಾರತೀಯ ವಾಯುಪಡೆ.

ಭಾರಿ ಹಿಮಪಾತದಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿದ ಕಾರಣ, ಸಿಲುಕಿಕೊಂಡಿದ್ದ ೫೩೮ ನಾಗರಿಕರನ್ನು ಭಾರತೀಯ ವಾಯುಪಡೆ ಸಿಬ್ಬಂದಿ, ಹೆಲಿಕಾಪ್ಟರ್ ಮೂಲಕ ರಕ್ಷಿಸಿದಾರೆ.
ಗೇಟ್ ಪರೀಕ್ಷೆಗೆ ಹಾಜರಾಗಿದ್ದ ೩೧೯ ವಿದ್ಯಾರ್ಥಿಗಳು ಸಹ ಇದರಲ್ಲಿ ಸೇರಿದ್ದಾರೆ ಎಂದು ರಕ್ಷಣಾ ಇಲಾಖೆ ವಕ್ತಾರರು ತಿಳಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿದ ಕಾರಣ ಅವಳಿ ರಾಜಧಾನಿಗಳಲ್ಲಿ ಸ್ಥಳೀಯರು ಹಾಗೂ ಪ್ರವಾಸಿಗರು ಸಿಲುಕಿಕೊಂಡಿದ್ದರು.