ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ದೇವಸರ್ ಪ್ರದೇಶದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ.

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ದೇವ್‌ಸಾರ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಹಾಗೂ ಭಯೋತ್ಪಾದಕರ ನಡುವೆ ಇಂದು ಬೆಳಿಗ್ಗೆಯಿಂದ ನಡೆಯುತ್ತಿರುವ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತ್ಯೆಯಾಗಿದ್ದಾರೆ.ಈ ಪ್ರದೇಶದಲ್ಲಿ ಮತ್ತೊಬ್ಬ ಉಗ್ರ ಅಡಗಿರುವ ಸಾಧ್ಯತೆ ಇದೆ ಎಂದು   ಭದ್ರತಾ ಪಡೆಗಳು ತಿಳಿಸಿವೆ.ಕುಲ್ಗಾಮ್‌ನ ದೇವಸರ್ ಪ್ರದೇಶದ ಕೀಲಂ ಗ್ರಾಮದಲ್ಲಿ ಉಗ್ರರು ಇರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳ ಜಂಟಿ ತಂಡ ಶೋಧ ಕಾರ್ಯ ಆರಂಭಿಸಿತ್ತು. ಭದ್ರತಾ ತಂಡ ಗ್ರಾಮದ ನಿರ್ದಿಷ್ಟ ಪ್ರದೇಶಕ್ಕೆ ತಲುಪಿದಾಗ ಅಡಗಿ ಕುಳಿತಿದ್ದ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಈ ಪ್ರದೇಶದಲ್ಲಿ ಮುಂಜಾಗೃತಾ ಕ್ರಮವಾಗಿ ಮೊಬೈಲ್ ಇಂಟರ್‌ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.