ಮುಂಬರುವ ಲೋಕಸಭಾ ಚುನಾವಣೆಗೆ ಮೈತ್ರಿ ಮಾಡಿಕೊಳ್ಳಲು ಬಿಜೆಪಿ, ಶಿವಸೇನೆ ನಿರ್ಧಾರ; ಸೀಟು ಹಂಚಿಕೆ ಪ್ರಕ್ರಿಯೆ ಪೂರ್ಣ

ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳಲು ಮುಂದಾಗಿರುವ ಬಿಜೆಪಿ ಮತ್ತು ಶಿವಸೇನೆ ಈಗ ಸೀಟು ಹಂಚಿಕೆ ಪ್ರಕ್ರಿಯೆಯನ್ನೂ ಪೂರ್ಣಗೊಳಿಸಿದೆ.

ಮುಂಬೈನಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮತ್ತು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ, ಸೀಟು ಹಂಚಿಕೆ ಬಗ್ಗೆ ಮಾಹಿತಿ ನೀಡಿದರು.

ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳಲು ಬಿಜೆಪಿ ಮತ್ತು ಶಿವಸೇನೆ ಸಮ್ಮತಿಸಿದೆ ಎಂದು ಫಡ್ನವೀಸ್ ತಿಳಿಸಿದರು.

ಮೂವರು ನಾಯಕರ ಮಾತುಕತೆಯ ನಂತರ ಸೀಟು ಹಂಚಿಕೆ ಪ್ರಕ್ರಿಯೆ ಪೂರ್ಣಗೊಂಡಿದೆ. ಒಟ್ಟು ೪೮ ಸ್ಥಾನಗಳನ್ನು ಹೊಂದಿರುವ ಮಹಾರಾಷ್ಟ್ರದಲ್ಲಿ ಬಿಜೆಪಿ ೨೫ ಮತ್ತು ಶಿವಸೇನೆ ೨೩ ಕ್ಷೇತ್ರಗಳನ್ನು ಹಂಚಿಕೊಂಡಿವೆ.

ಲೋಕಸಭೆ ಮಾತ್ರವಲ್ಲ, ವಿಧಾನಸಭೆ ಚುನಾವಣೆಯಲ್ಲೂ ಬಿಜೆಪಿ, ಶಿವಸೇನೆ ಮೈತ್ರಿ ಮಾಡಿಕೊಳ್ಳಲು ನಿರ್ಧರಿಸಿವೆ. ವಿಧಾನಸಭೆ ಚುನಾವಣೆ ಉಭಯ ಪಕ್ಷಗಳ ತಲಾ ೫೦:೫೦ ಸೀಟುಗಳನ್ನು ಹಂಚಿಕೊಂಡು ಸ್ಪರ್ಧಿಸಲಿವೆ.

ವಿಧಾನಸಭೆಗೆ ಸೀಟು ಹಂಚಿಕೆಗಳ ಬಗ್ಗೆ ಸಣ್ಣ ಪಕ್ಷಗಳ ನಂತರ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮೂಲಗಳು ತಿಳಿಸಿವೆ.