ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳಿಂದ ಉಗ್ರರ ಅಡಗುದಾಣ ಪತ್ತೆ – ಶಸ್ತ್ರಾಸ್ತ್ರ, ಮದ್ದುಗುಂಡು ವಶ.

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ದಕ್ಷಿಣ ಭಾಗದಲ್ಲಿ ಭಯೋತ್ಪಾದಕರ ಅಡಗು ತಾಣವನ್ನು ಭಾರತೀಯ ಸೇನಾ ಪಡೆ ಪತ್ತೆಹಚ್ಚಿದ್ದು, ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದೆ. ಈ ಸಂಬಂಧ ಎರಿಪೋರಾದ ಮೊಹಮ್ಮದ್ ಅಯೂಬ್ ರ‍್ಯಾದರ್ ಎಂಬಾತನನ್ನು ಬಂಧಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ಈ ಪ್ರದೇಶದಲ್ಲಿ ವಸತಿ ಕಟ್ಟಡವೊಂದರಲ್ಲಿ ಪೊಲೀಸರು ಹಾಗೂ ಸೇನಾಪಡೆ ಶೋಧ ಕಾರ್ಯಾಚರಣೆ ನಡೆಸಿದವು ಎಂದು ಸೇನಾ ಮೂಲಗಳು ತಿಳಿಸಿವೆ.