ದೆಹಲಿಯಲ್ಲಿಂದು ಭಾರತ-ಆಸ್ಟ್ರೇಲಿಯಾ ನಡುವೆ ನಿರ್ಣಾಯಕ ಏಕದಿನ ಕ್ರಿಕೆಟ್ ಪಂದ್ಯ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಏಕದಿನ ಕ್ರಿಕೆಟ್ ಸರಣಿಯ ಐದನೇ ಮತ್ತು ಕೊನೆಯ ಪಂದ್ಯ ದೆಹಲಿಯಲ್ಲಿಂದು ನಡೆಯಲಿದೆ. ಮಧ್ಯಾಹ್ನ ೧.೩೦ಕ್ಕೆ ಪಂದ್ಯ ಆರಂಭಗೊಳ್ಳಲಿದ್ದು, ಸರಣಿ ಗೆಲ್ಲಲು ಎರಡೂ ತಂಡಗಳಿಗೆ ಈ ಪಂದ್ಯ ನಿರ್ಣಾಯಕವಾಗಿದೆ. ಕಳೆದ ನಾಲ್ಕು ಪಂದ್ಯಗಳಲ್ಲಿ ಎರಡೂ ತಂಡಗಳು ತಲಾ ಎರಡಲ್ಲಿ ಜಯ ಸಾಧಿಸಿವೆ.ನಾಲ್ಕನೇ ಏಕದಿನ ಪಂದ್ಯದಲ್ಲಿ ವಿಶ್ರಾಂತಿ ಪಡೆದಿದ್ದ ಎಂ.ಎಸ್. ಧೋನಿ ಈ ಪಂದ್ಯದಲ್ಲಿಯೂ ಹೊರಗುಳಿಯಲಿದ್ದಾರೆ.