ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಂದ ವಿವಿಧ ಶೌರ್ಯ ಹಾಗೂ ಸೇನಾ ಪದಕಗಳ ಪ್ರದಾನ.

ದೆಹಲಿಯ ರಾಷ್ಟ್ರಪತಿ ಭವನದಲ್ಲಿಂದು ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಭಾರತೀಯ ಸೇನಾ ಪಡೆಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಸಿಬ್ಬಂದಿಗೆ ಪ್ರತಿಷ್ಠಿತ ಪ್ರಶಸ್ತಿಗಳನ್ನು ವಿತರಿಸಿ ಸನ್ಮಾನಿಸಿದರು. ಎರಡು ಕೀರ್ತಿ ಚಕ್ರ ಹಾಗೂ ಒಂದು ಶೌರ್ಯ ಚಕ್ರ ಪದಕವನ್ನು ಮರಣೋತ್ತರವಾಗಿ ಪ್ರದಾನ ಮಾಡಲಾಯಿತು. ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರಿಗೆ ಪರಮ ವಿಶಿಷ್ಠ ಸೇವಾ ಪದಕವನ್ನು ನೀಡಿ ಗೌರವಿಸಲಾಯಿತು. ಪದಕ ಪ್ರದಾನ ಸಮಾರಂಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.